ರಾಯಚೂರು: ಸ್ವಾತಂತ್ರ್ಯಾನಂತರ ದೇಶದ ವಿವಿಧ ಸಂಸ್ಥಾನಗಳನ್ನು ಭಾರತದ ಒಕ್ಕೂಟಕ್ಕೆ ಸೇರ್ಪಡೆಗೊಳಿಸುವ ಮೂಲಕ ರಾಷ್ಟ್ರದ ಏಕೀಕರಣ, ಐಕ್ಯತೆ ಮತ್ತು ಅಖಂಡತೆ ಸಾಧಿಸುವಲ್ಲಿ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರು ಅಪ್ರತಿಮ ಕೊಡುಗೆ ನೀಡಿದ್ದಾರೆ ಎಂದು ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ಪ್ರಾಂಶುಪಾಲೆ ಡಾ. ಸುಗುಣಾ ಬಸವರಾಜ್ ಹೇಳಿದರು.
ವಿದ್ಯಾರ್ಥಿಗಳು ಉತ್ತಮ ವ್ಯಕ್ತಿತ್ವ ರೂಪಿಸಿಕೊಳ್ಳಲು ನೈತಿಕ ಮೌಲ್ಯಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳುವುದರ ಜೊತೆಗೆ ನಾಯಕತ್ವದ ಗುಣಗಳನ್ನು ಬೆಳೆಸಿಕೊಳ್ಳಬೇಕು ಎಂದು ಹಿರಿಯ ಉಪನ್ಯಾಸಕ ಗೋವರ್ಧನ್ ರೆಡ್ಡಿ ಕರೆ ನೀಡಿದರು.
ತಾಲೂಕಿನ ದೇವಸೂಗೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಬ್ಬೇರು ಓಣಿಯಲ್ಲಿ ಆರು ಮನೆಗಳ ಸಾರ್ವಜನಿಕ ಬಳಕೆಗೆ ಕುಡಿಯುವ ನೀರಿನ ನಳ ಅಳವಡಿಸುವುದು ಹಾಗೂ ಚರಂಡಿ ಸ್ವಚ್ಛಗೊಳಿಸುವಂತೆ ಒತ್ತಾಯಿಸಿ ಅಂಬೇಡ್ಕರ್ ಸೇವಾ ಸಮಿತಿ ಕರ್ನಾಟಕದ ವತಿಯಿಂದ ಕೃಷ್ಣ ಅವರು ಗ್ರಾಮ ಪಂಚಾಯಿತಿ ಅಧ್ಯಕ್ಷರು ಹಾಗೂ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಗೆ ಮರುಜ್ಞಾಪನಾ…
ಉಡುಪಿ ಜಿಲ್ಲೆಯ ಬ್ರಹ್ಮಾವರದ ಎಸ್ಎಂಎಸ್ ಒಳಾಂಗಣ ಕ್ರೀಡಾಂಗಣದಲ್ಲಿ ಅಕ್ಟೋಬರ್ 25ರಂದು ನಡೆದ ರಾಷ್ಟ್ರಮಟ್ಟದ ಕರಾಟೆ ಸ್ಪರ್ಧೆಯಲ್ಲಿ ರಾಯಚೂರು ತಾಲೂಕಿನ ದೇವಸುಗೂರಿನ ಸೂಗೂರೇಶ್ವರ ಕರಾಟೆ ಸಂಸ್ಥೆಯ ವಿದ್ಯಾರ್ಥಿಗಳು ಅತ್ಯುತ್ತಮ ಪ್ರದರ್ಶನ ನೀಡಿ ವಿವಿಧ ವಿಭಾಗಗಳಲ್ಲಿ ಪದಕ ಹಾಗೂ ಟ್ರೋಫಿಗಳನ್ನು ಗಳಿಸುವ ಮೂಲಕ ಜಿಲ್ಲೆಗೆ ಕೀರ್ತಿ…
ರಾಯಚೂರು, ಅ.31: ನಗರದ ಬೇರೂನಕಿಲ್ಲ ಬಡಾವಣೆಯ ವಾರ್ಡ್ ನಂ. 09ರ ವ್ಯಾಪ್ತಿಯ ಪ್ರಮುಖ ರಸ್ತೆಗಳು ದುಸ್ಥಿತಿಗೆ ತಲುಪಿದ್ದು, ಸಾರ್ವಜನಿಕರ ಸುರಕ್ಷತೆಯ ದೃಷ್ಟಿಯಿಂದ ತಕ್ಷಣ ದುರಸ್ತಿ ಕಾರ್ಯ ಕೈಗೊಳ್ಳಬೇಕು ಎಂದು ಯುವ ಹೋರಾಟಗಾರ ಹಾಗೂ ಸಮಾಜಸೇವಕ ರವಿಚಂದ್ರ ಅಲಿಯಾಸ್ ಆಟೋರವಿ ಆಗ್ರಹಿಸಿದ್ದಾರೆ.
ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವುದು, ಅಪರಾಧ ಚಟುವಟಿಕೆಗಳಿಗೆ ಕಡಿವಾಣ ಹಾಕುವುದು ಹಾಗೂ ಸಾರ್ವಜನಿಕ ಸುರಕ್ಷತೆ ಬಲಪಡಿಸುವ ಉದ್ದೇಶದಿಂದ ಜಿಲ್ಲಾ ಪೊಲೀಸ್ ಇಲಾಖೆ ಅಕ್ಟೋಬರ್ 27ರಿಂದ 30ರವರೆಗೆ ವಿಶೇಷ ಕಾರ್ಯಾಚರಣೆ ನಡೆಸಿ ವಿವಿಧ ಪ್ರಕರಣಗಳನ್ನು ದಾಖಲಿಸಿದೆ.
ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರ ಪುಣ್ಯತಿಥಿ ಹಾಗೂ ಭಾರತದ ಮೊದಲ ಉಪಪ್ರಧಾನಿ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಜನ್ಮದಿನದ ಅಂಗವಾಗಿ ಶನಿವಾರ ನಗರದ ಜಿಲ್ಲಾ ಕಾಂಗ್ರೆಸ್ ಕಾರ್ಯಾಲಯದಲ್ಲಿ ಸ್ಮರಣಾ ಕಾರ್ಯಕ್ರಮ ಆಯೋಜಿಸಲಾಗಿತ್ತು.
ಬೆಂಗಳೂರು ಹಾಗೂ ರಾಯಚೂರು ಕೃಷಿ ವಿಶ್ವವಿದ್ಯಾನಿಲಯಗಳ ಕುಲಪತಿಗಳ ನೇಮಕಾತಿಯಲ್ಲಿ ಹಣ, ಜಾತಿ ಮತ್ತು ರಾಜಕೀಯ ಪ್ರಭಾವಕ್ಕೆ ಅವಕಾಶ ನೀಡದೆ, ಅರ್ಹತೆ, ಪ್ರಾಮಾಣಿಕತೆ ಹಾಗೂ ರೈತಪರ ಕಾಳಜಿ ಹೊಂದಿರುವ ವ್ಯಕ್ತಿಗಳನ್ನು ಆಯ್ಕೆ ಮಾಡಬೇಕು ಎಂದು ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯ ಗೌರವಾಧ್ಯಕ್ಷ ಚಾಮರಸ ಮಾಲಿಪಾಟೀಲ ಆಗ್ರಹಿಸಿದ್ದಾರೆ.
ಬರಗಾಲ ಹಾಗೂ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಜನಸಾಮಾನ್ಯರು ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ಸಂದರ್ಭದಲ್ಲಿ ಹಾಲಿನ ದರ ಹೆಚ್ಚಳ ಮತ್ತು ಬಸ್ ಪ್ರಯಾಣ ದರ ಏರಿಕೆ ಪ್ರಸ್ತಾವನೆ ಜನರ ಮೇಲೆ ಮತ್ತಷ್ಟು ಹೊರೆ ಹೊರಿಸಲಿದೆ ಎಂದು ಆರೋಪಿಸಿ ಎಸ್ಯುಸಿಐ (ಕಮ್ಯುನಿಸ್ಟ್) ಪಕ್ಷದ ಕಾರ್ಯಕರ್ತರು ನಗರದಲ್ಲಿ ಪ್ರತಿಭಟನೆ ನಡೆಸಿದರು.
ಕನ್ನಡ ರಾಜ್ಯೋತ್ಸವದ ಅಂಗವಾಗಿ ನವೆಂಬರ್ 1ರಂದು ನಗರದ ಮಹಾತ್ಮ ಗಾಂಧಿ ಕ್ರೀಡಾಂಗಣದಲ್ಲಿ ರಾಜ್ಯಮಟ್ಟದ ‘ಮಿಸ್ಟರ್ ಕರ್ನಾಟಕ ರತ್ನ–2026’ ದೇಹದಾರ್ಢ್ಯ ಸ್ಪರ್ಧೆ ಆಯೋಜಿಸಲಾಗಿದ್ದು, ರಾಜ್ಯದ ವಿವಿಧ ಜಿಲ್ಲೆಗಳಿಂದ ನೂರಾರು ದೇಹದಾರ್ಢ್ಯ ಪಟುಗಳು ಭಾಗವಹಿಸಲಿದ್ದಾರೆ ಎಂದು ರಾಯಚೂರು ಜಿಲ್ಲಾ ದೇಹದಾರ್ಢ್ಯ ಸಂಘದ ಪ್ರಧಾನ ಕಾರ್ಯದರ್ಶಿ…
ಕರ್ನಾಟಕ ಭೋವಿ ಅಭಿವೃದ್ಧಿ ನಿಗಮದ ಭೂ ಖರೀದಿ ಯೋಜನೆಯಡಿ ರಾಯಚೂರು ಜಿಲ್ಲೆಯಲ್ಲಿ ಸುಮಾರು ₹24 ಕೋಟಿ ಮೊತ್ತದ ಅವ್ಯವಹಾರ ನಡೆದಿದೆ ಎಂದು ಕರ್ನಾಟಕ ರಾಜ್ಯ ರೈತ ರಕ್ಷಕ ಸೇನೆಯ ಸಂಸ್ಥಾಪಕ ರಾಜ್ಯಾಧ್ಯಕ್ಷ ಚಂದ್ರಶೇಖರ್ ಬಿ.ಟಿ.
ಪಾರ್ಶ್ವವಾಯು ಸಂಭವಿಸಿದ ಸಂದರ್ಭದಲ್ಲಿ ಪ್ರತಿ ನಿಮಿಷವೂ ಅತ್ಯಂತ ಅಮೂಲ್ಯವಾಗಿದ್ದು, ಆರಂಭಿಕ ಲಕ್ಷಣಗಳನ್ನು ಗುರುತಿಸಿ ತಕ್ಷಣ ವೈದ್ಯಕೀಯ ಚಿಕಿತ್ಸೆ ಕೊಡಿಸುವುದರಿಂದ ಜೀವ ಉಳಿಸುವುದರ ಜೊತೆಗೆ ಶಾಶ್ವತ ಅಂಗವೈಕಲ್ಯದ ಅಪಾಯವನ್ನೂ ಕಡಿಮೆ ಮಾಡಬಹುದು ಎಂದು ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಅರವಿಂದ್ ಕುಮಾರ್ ತಿಳಿಸಿದರು.
ತಾಲೂಕಿನ ಮಮದಾಪುರ ಗ್ರಾಮದಲ್ಲಿ ಅಪ್ಪು ಸರ್ ಸೇವಾ ಸಮಿತಿ ಹಾಗೂ ಸಿದ್ದು ಸೂರ್ಯವಂಶಿ ಗೆಳೆಯರ ಬಳಗದ ನೇತೃತ್ವದಲ್ಲಿ ಅಕ್ಟೋಬರ್ 29ರಂದು ಸಂಜೆ ಕರ್ನಾಟಕ ರತ್ನ, ಪವರ್ ಸ್ಟಾರ್ ಪುನೀತ್ ರಾಜ್ಕುಮಾರ್ ಅವರ 5ನೇ ವರ್ಷದ ಪುಣ್ಯಸ್ಮರಣೆ ಅಂಗವಾಗಿ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿದ ಸಾಧಕರನ್ನು ಸನ್ಮಾನಿಸುವ ಮೂಲಕ…
ನಗರದ ಎಲ್ಬಿಎಸ್ ನಗರದಲ್ಲಿ ಇತ್ತೀಚೆಗೆ ನಡೆದ ಬಾಪೂರು ನರಸಿಂಹ ಶೆಟ್ಟಿ ಅವರ ಹತ್ಯೆಯನ್ನು ತೀವ್ರವಾಗಿ ಖಂಡಿಸಿರುವ ಕರ್ನಾಟಕ ಆರ್ಯವೈಶ್ಯ ಮಹಾಸಭಾ ಹಾಗೂ ಜಿಲ್ಲಾ ಸಮಿತಿ, ಆರೋಪಿಗೆ ಕಠಿಣ ಶಿಕ್ಷೆ ವಿಧಿಸುವುದರ ಜೊತೆಗೆ ಮೃತರ ಕುಟುಂಬಕ್ಕೆ ₹50 ಲಕ್ಷ ಪರಿಹಾರ ಹಾಗೂ ಸೂಕ್ತ ಪೊಲೀಸ್ ಭದ್ರತೆ ಒದಗಿಸುವಂತೆ ಒತ್ತಾಯಿಸಿದೆ.
ರಾಯಚೂರು ಕೃಷಿ ವಿಶ್ವವಿದ್ಯಾಲಯದಲ್ಲಿ ಸರ್ಕಾರದ ನಿಯಮಾವಳಿಗಳನ್ನು ಉಲ್ಲಂಘಿಸಿ, ಆರ್ಥಿಕ ಇಲಾಖೆಯ ಅನುಮೋದನೆ ಪಡೆಯದೆ 75 ಹುದ್ದೆಗಳಿಗೆ ನೇಮಕಾತಿ ನಡೆಸಲಾಗಿದೆ ಎಂದು ಆರೋಪಿಸಿರುವ ಜೆಡಿಎಸ್ ಜಿಲ್ಲಾಧ್ಯಕ್ಷ ಎಂ.
ತಾಲೂಕಿನ ಎಲೆಬಿಚ್ಚಾಲಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗಟ್ಟುಬಿಚ್ಚಾಲಿ ಗ್ರಾಮದಲ್ಲಿ ನ್ಯಾಯಬೆಲೆ ಅಂಗಡಿ ಇಲ್ಲದಿರುವುದರಿಂದ ಪಡಿತರ ಸಾಮಗ್ರಿ ಪಡೆಯಲು ಗ್ರಾಮಸ್ಥರು ತೀವ್ರ ತೊಂದರೆ ಅನುಭವಿಸುತ್ತಿದ್ದು, ಗ್ರಾಮದಲ್ಲಿಯೇ ಹೊಸ ನ್ಯಾಯಬೆಲೆ ಅಂಗಡಿ ಆರಂಭಿಸುವಂತೆ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಅಧಿಕಾರಿಗಳಿಗೆ ಒತ್ತಾಯಿಸಿದ್ದಾರೆ.
ನಗರದ ಪೆಟ್ಲಾಬುರ್ಜ್ ಸಮೀಪದ ಗಂಗಾನಿವಾಸ ರಸ್ತೆಯಲ್ಲಿರುವ ಗಣೇಶ ಕಟ್ಟೆ ಆಟೋ ನಿಲ್ದಾಣ ಸಂಘದ ವತಿಯಿಂದ ಕರ್ನಾಟಕ ರತ್ನ ಪುನೀತ್ ರಾಜ್ಕುಮಾರ್ ಅವರ ಐದನೇ ವರ್ಷದ ಪುಣ್ಯಸ್ಮರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.
ರಾಯಚೂರು, ಅ.29: ಶಕ್ತಿನಗರ ಪೊಲೀಸ್ ಠಾಣೆ ವ್ಯಾಪ್ತಿಯ ಬೇವಿನಬೆಂಚಿ ರಸ್ತೆಯ ಕೈಗಾರಿಕಾ ಪ್ರದೇಶದ ನಿವಾಸಿ ದೇವರಾಜ್ ಡಿ. (31), ತಂದೆ ಶಿವರಾಜಪ್ಪ ದೇವರಮನಿ ಎಂಬ ಯುವಕ ಅಕ್ಟೋಬರ್ 15ರಿಂದ ನಾಪತ್ತೆಯಾಗಿದ್ದು, ಆತನ ಪತ್ತೆಗೆ ಸಾರ್ವಜನಿಕರು ಸಹಕರಿಸುವಂತೆ ಪೊಲೀಸರು ಮನವಿ ಮಾಡಿದ್ದಾರೆ.
ಗ್ರಾಮೀಣ ಕ್ರೀಡೆಯಾದ ಕಬಡ್ಡಿಗೆ ಉತ್ತೇಜನ ನೀಡುವ ಉದ್ದೇಶದಿಂದ ಜಯ ಕರ್ನಾಟಕ ಸಂಘಟನೆಯ ವತಿಯಿಂದ ತಾಲೂಕಿನ ದೇವಸೂಗೂರಿನ ಶ್ರೀ ಸೂಗೂರೇಶ್ವರ ಸ್ವಾಮಿ ದೇವಸ್ಥಾನದ ಆವರಣದಲ್ಲಿ ಅಕ್ಟೋಬರ್ 31 ಮತ್ತು ನವೆಂಬರ್ 1ರಂದು ಎರಡು ದಿನಗಳ ರಾಜ್ಯಮಟ್ಟದ ಮುಕ್ತ ಕಬಡ್ಡಿ ಪಂದ್ಯಾವಳಿ ಆಯೋಜಿಸಲಾಗಿದೆ ಎಂದು ಸಂಘಟನೆಯ ಜಿಲ್ಲಾಧ್ಯಕ್ಷ ಎಸ್.
ರಾಯಚೂರು, ಅ.29: ರಾಯಚೂರು ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದ ಪ್ರಭಾರ ಕುಲಪತಿಯಾಗಿ ಡಾ. ಗುರುರಾಜ ಸುಂಕದ ಅವರನ್ನು ನೇಮಕ ಮಾಡಲಾಗಿದ್ದು, ಅಕ್ಟೋಬರ್ 28ರಂದು ಅವರು ಅಧಿಕಾರ ಸ್ವೀಕರಿಸಿದರು. ಕರ್ನಾಟಕದ ರಾಜ್ಯಪಾಲರಾದ ಡಾ. ಸುಧಾ ಯಾದವ್ ಅವರು ಡಾ.