ತುಂಗ ಬಿಂಬನಿಮ್ಮ ಕನ್ನಡ ದಿನಪತ್ರಿಕೆ ಈಗ ವೆಬ್ ಮತ್ತು ಇ-ಪೇಪರ್‌ನಲ್ಲಿಇಂದಿನ ಇ-ಪೇಪರ್ ಓದಿ →
👁 ಒಟ್ಟು ವೀಕ್ಷಣೆಗಳು: 127,914 ಇಂದಿನ ಓದುಗರು: 1,216 🟢 ಈಗ ಆನ್‌ಲೈನ್: 18
LATEST NEWS

ಸಿಂಧನೂರು

ರಾಯಚೂರು ಮತ್ತು ಕಲ್ಯಾಣ ಕರ್ನಾಟಕದ ಪ್ರಮುಖ ಬೆಳವಣಿಗೆಗಳು.

ಕಲ್ಯಾಣ ಕರ್ನಾಟಕ › ರಾಯಚೂರು › ಸಿಂಧನೂರು
ಎಲ್ಲಾ ರಾಯಚೂರು ರಾಯಚೂರು ಮಾನ್ವಿ ದೇವದುರ್ಗ ಅರಕೇರಾ ಸಿರವಾರ ಲಿಂಗಸುಗೂರು ಸಿಂಧನೂರು ಮಸ್ಕಿ
ಎಲ್ಲಾ ರಾಯಚೂರು ಮಾನ್ವಿ ದೇವದುರ್ಗ ಸಿಂಧನೂರು ಲಿಂಗಸುಗೂರು ಸಿರವಾರ ಮಸ್ಕಿ ಕರ್ನಾಟಕ ರಾಜಕೀಯ ಶಿಕ್ಷಣ ಕ್ರೀಡೆ ಸಂಸ್ಕೃತಿ Crime Extra ಇತರೆ ಮಂತ್ರಾಲಯ ಲೇಖನ ಅರಕೇರಾ ಬೆಂಗಳೂರು ಬಾಗಲಕೋಟೆ ನವದೆಹಲಿ ಹೊಸಪೇಟೆ ಕಲಬುರಗಿ ಮೈಸೂರು ಗಂಗಾವತಿ ಶಹಾಪುರ ಮೀರುತ್ ಹೈದರಾಬಾದ್ ಕೊಪ್ಪಳ ಪಣಜಿ ಯಾದಗಿರಿ ಐಚಿ–ನಾಗೋಯಾ ಕುಷ್ಟಗಿ ನೆಲಮಂಗಲ

ಒಟ್ಟು 50 ಸುದ್ದಿಗಳಲ್ಲಿ 1–25 ಸುದ್ದಿಗಳು

ಸಿಂಧನೂರು ರಾಯಚೂರು

ಉಚಿತ ಆರೋಗ್ಯ ತಪಾಸಣಾ ಶಿಬಿರ: ಸದುಪಯೋಗಕ್ಕೆ ಶಾಸಕ ಆರ್. ಬಸನಗೌಡ ಕರೆ

ತಾಲೂಕಿನ ತುರುವಿಹಾಳ ಸಮುದಾಯ ಆರೋಗ್ಯ ಕೇಂದ್ರದಲ್ಲಿ ವಿವಿಧ ಕಾಯಿಲೆಗಳ ತಪಾಸಣೆಗಾಗಿ 40ಕ್ಕೂ ಹೆಚ್ಚು ನುರಿತ ವೈದ್ಯರನ್ನೊಳಗೊಂಡ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಆಯೋಜಿಸಲಾಗಿದ್ದು, ತುರುವಿಹಾಳ ಹಾಗೂ ಸುತ್ತಮುತ್ತಲಿನ ಗ್ರಾಮಗಳ ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಶಾಸಕ ಆರ್.

ಮುಂದೆ ಓದಿ →
ಸಿಂಧನೂರು ರಾಯಚೂರು

ಅನಾರೋಗ್ಯ ಪೀಡಿತ ರಂಗನಾಥ ಕೋರಿಶೆಟ್ಟಿಗೆ ಕಾರುಣ್ಯ ಆಶ್ರಮದಲ್ಲಿ ಆಶ್ರಯ

ಅನಾರೋಗ್ಯದಿಂದ ಬಳಲುತ್ತಿದ್ದು, ಕುಟುಂಬದವರಿಂದ ಸೂಕ್ತ ಆರೈಕೆ ದೊರೆಯದೆ ಸಂಕಷ್ಟಕ್ಕೆ ಸಿಲುಕಿದ್ದ ರಾಯಚೂರು ನಗರದ ಎನ್‌ಜಿಒ ಕಾಲೋನಿ ನಿವಾಸಿ ರಂಗನಾಥ ಕೋರಿಶೆಟ್ಟಿ (55) ಅವರಿಗೆ ಸಿಂಧನೂರಿನ ಕಾರುಣ್ಯ ನೆಲೆ ವೃದ್ಧಾಶ್ರಮ ಹಾಗೂ ಬುದ್ಧಿಮಾಂದ್ಯ ಆಶ್ರಮದಲ್ಲಿ ಆಶ್ರಯ ಕಲ್ಪಿಸುವ ಮೂಲಕ ಮಾನವೀಯತೆ ಮೆರೆಯಲಾಗಿದೆ.

ಮುಂದೆ ಓದಿ →
ಸಿಂಧನೂರು ರಾಯಚೂರು

ಸ್ಕೌಟ್ಸ್ ಮತ್ತು ಗೈಡ್ಸ್‌ನಿಂದ ಮಕ್ಕಳಲ್ಲಿ ಶಿಸ್ತು, ಸೇವಾ ಮನೋಭಾವ ವೃದ್ಧಿ: ಎಸ್. ಶರಣೇಗೌಡ

ವಿದ್ಯಾರ್ಥಿಗಳಲ್ಲಿ ಶಿಸ್ತು, ಸಂಯಮ, ನಾಯಕತ್ವ ಗುಣ ಹಾಗೂ ಸಮಾಜಸೇವೆಯ ಮನೋಭಾವ ಬೆಳೆಸುವಲ್ಲಿ ಸ್ಕೌಟ್ಸ್ ಮತ್ತು ಗೈಡ್ಸ್ ಚಟುವಟಿಕೆಗಳು ಮಹತ್ವದ ಪಾತ್ರ ವಹಿಸುತ್ತವೆ.

ಮುಂದೆ ಓದಿ →
ಸಿಂಧನೂರು ರಾಯಚೂರು

ಅಪಘಾತಕ್ಕೊಳಗಾದ ಹಸುವಿಗೆ ಚಿಕಿತ್ಸೆ ಕೊಡಿಸಿ ಮಾನವೀಯತೆ ಮೆರೆದ ವನಸಿರಿ ಅಮರೇಗೌಡ ಮಲ್ಲಾಪುರ

ಗಿಡಮರಗಳ ಸಂರಕ್ಷಣೆಯ ಜೊತೆಗೆ ಪ್ರಾಣಿ-ಪಕ್ಷಿಗಳ ರಕ್ಷಣೆಯಲ್ಲಿಯೂ ನಿರಂತರವಾಗಿ ತೊಡಗಿಸಿಕೊಂಡಿರುವ ಪರಿಸರ ರಾಜ್ಯ ಪ್ರಶಸ್ತಿ ಪುರಸ್ಕೃತ ಹಾಗೂ ವನಸಿರಿ ಫೌಂಡೇಷನ್ ಅಧ್ಯಕ್ಷ ಅಮರೇಗೌಡ ಮಲ್ಲಾಪುರ ಅವರು ವಾಹನ ಡಿಕ್ಕಿಯಿಂದ ಗಾಯಗೊಂಡಿದ್ದ ಹಸುವಿಗೆ ಪಶುವೈದ್ಯರ ಮೂಲಕ ಚಿಕಿತ್ಸೆ ಕೊಡಿಸುವ ಮೂಲಕ ಮಾನವೀಯತೆ ಮೆರೆದಿದ್ದಾರೆ.

ಮುಂದೆ ಓದಿ →
ಸಿಂಧನೂರು ರಾಯಚೂರು

ಕಾರುಣ್ಯಾಶ್ರಮಕ್ಕೆ ಬೆಲ್ಲದಮರಡಿಯ ವೆಂಕಣ್ಣ ಅವರಿಂದ ₹1 ಲಕ್ಷ ದೇಣಿಗೆ

ಮಸ್ಕಿ ತಾಲೂಕಿನ ಬೆಲ್ಲದಮರಡಿ ಗ್ರಾಮದ 75 ವರ್ಷದ ವೆಂಕಣ್ಣ ಹನುಮಂತ್ರಾಯ ಅಸರಡ್ಡಿ ಅವರು ನಗರದ ಕಾರುಣ್ಯ ನೆಲೆ ವೃದ್ಧಾಶ್ರಮ ಹಾಗೂ ವಯಸ್ಕರ ಬುದ್ಧಿಮಾಂದ್ಯ ಆಶ್ರಮದ ನಿರ್ವಹಣೆಗಾಗಿ ₹1 ಲಕ್ಷ ದೇಣಿಗೆ ನೀಡುವ ಮೂಲಕ ಮಾನವೀಯತೆ ಮೆರೆದಿದ್ದಾರೆ.

ಮುಂದೆ ಓದಿ →
ಸಿಂಧನೂರು ರಾಯಚೂರು

ಡಿಸೆಂಬರ್ ಅಂತ್ಯದೊಳಗೆ ಅರ್ಹರಿಗೆ ಇ-ಸ್ವತ್ತು ದಾಖಲೆ ವಿತರಿಸಿ: ಹಾಲಸಿದ್ದಪ್ಪ ಸೂಚನೆ

ಭೂ ಗ್ಯಾರಂಟಿ ಯೋಜನೆಯಡಿ ಅಗತ್ಯ ದಾಖಲೆಗಳನ್ನು ಹೊಂದಿರುವ ಅರ್ಹ ಆಸ್ತಿ ಮಾಲೀಕರಿಗೆ ಡಿಸೆಂಬರ್ ಅಂತ್ಯದೊಳಗೆ ಇ-ಸ್ವತ್ತು ದಾಖಲೆಗಳನ್ನು ವಿತರಿಸಲು ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾ ಪಂಚಾಯಿತಿ ಉಪಕಾರ್ಯದರ್ಶಿ ಹಾಲಸಿದ್ದಪ್ಪ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಗೆ ಸೂಚಿಸಿದರು.

ಮುಂದೆ ಓದಿ →
ಸಿಂಧನೂರು ರಾಯಚೂರು

ತಿಡಿಗೋಳ ಗ್ರಾಮದಲ್ಲಿ ದಲಿತರಿಗೆ ದೇವಸ್ಥಾನ ಪ್ರವೇಶ: ಸಾಮಾಜಿಕ ಸಮಾನತೆಗೆ ಐತಿಹಾಸಿಕ ಹೆಜ್ಜೆ

ತಾಲೂಕಿನ ತಿಡಿಗೋಳ ಗ್ರಾಮದಲ್ಲಿ ದಲಿತ ಸಮುದಾಯದವರಿಗೆ ದೇವಸ್ಥಾನ ಪ್ರವೇಶಕ್ಕೆ ಅವಕಾಶ ಕಲ್ಪಿಸುವ ಮೂಲಕ ಹಲವು ವರ್ಷಗಳಿಂದ ಎದುರಾಗಿದ್ದ ಸಾಮಾಜಿಕ ಅಸಮಾನತೆಯ ಸಮಸ್ಯೆಗೆ ಸೌಹಾರ್ದಯುತ ಪರಿಹಾರ ಕಂಡುಕೊಳ್ಳಲಾಗಿದೆ.

ಮುಂದೆ ಓದಿ →
ಸಿಂಧನೂರು ರಾಯಚೂರು

ಪಾಲಕರ ಸಹಕಾರದಿಂದಲೇ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಸಾಧ್ಯ: ಡಾ. ಎಸ್. ಶಿವರಾಜ

ಮಕ್ಕಳ ಶೈಕ್ಷಣಿಕ ಪ್ರಗತಿ ಹಾಗೂ ಸರ್ವತೋಮುಖ ಬೆಳವಣಿಗೆಯಲ್ಲಿ ಶಿಕ್ಷಕರಷ್ಟೇ ಪಾಲಕರ ಪಾತ್ರವೂ ಮಹತ್ವದ್ದಾಗಿದೆ.

ಮುಂದೆ ಓದಿ →
ಸಿಂಧನೂರು

ಬುಕ್ಕನಹಟ್ಟಿಯಲ್ಲಿ ಕುಡಿಯುವ ನೀರಿಗೆ ಹಾಹಾಕಾರ: ಕೊಡ, ಬಿಂದಿಗೆ ಹಿಡಿದು ಗ್ರಾಮ ಪಂಚಾಯಿತಿಗೆ ಮುತ್ತಿಗೆ

ತಾಲೂಕಿನ ಉಮಲೂಟಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬುಕ್ಕನಹಟ್ಟಿ ಗ್ರಾಮದಲ್ಲಿ ಕಳೆದ ಒಂದೂವರೆ ವರ್ಷದಿಂದ ಎರಡು ವರ್ಷಗಳವರೆಗೆ ಸಮರ್ಪಕ ಕುಡಿಯುವ ನೀರು ಪೂರೈಕೆಯಾಗುತ್ತಿಲ್ಲ ಎಂದು ಆರೋಪಿಸಿ ಗ್ರಾಮಸ್ಥರು ಶನಿವಾರ ಕೊಡ, ಬಿಂದಿಗೆ ಹಿಡಿದು ಗ್ರಾಮ ಪಂಚಾಯಿತಿ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು.

ಮುಂದೆ ಓದಿ →
ಸಿಂಧನೂರು ರಾಯಚೂರು

ಅಂಭಾ ಭವಾನಿ ಶ್ರೀಮಠದ ಅಭಿವೃದ್ಧಿಗೆ ₹1 ಕೋಟಿ ನೀಡುವುದಾಗಿ ಬಸನಗೌಡ ದದ್ದಲ್ ಘೋಷಣೆ

ತಾಲೂಕಿನ ಪ್ರಸಿದ್ಧ ಅಂಭಾ ಭವಾನಿ ಶ್ರೀಮಠದ ಅಭಿವೃದ್ಧಿ ಕಾರ್ಯಗಳಿಗೆ ₹1 ಕೋಟಿ ನೆರವು ನೀಡುವುದಾಗಿ ರಾಯಚೂರು ಗ್ರಾಮಾಂತರ ಶಾಸಕ ಬಸನಗೌಡ ದದ್ದಲ್ ಘೋಷಿಸಿದರು.

ಮುಂದೆ ಓದಿ →
ಸಿಂಧನೂರು ರಾಯಚೂರು

ನಿಂತಿದ್ದ ಲಾರಿಗೆ ಟಿಟಿ ವಾಹನ ಡಿಕ್ಕಿ: ಓರ್ವನ ಸ್ಥಿತಿ ಗಂಭೀರ, 13 ಮಂದಿಗೆ ಗಾಯ

ತಾಲೂಕಿನ ಅರಗಿನಮರದ ಸಮೀಪ ಶುಕ್ರವಾರ ಬೆಳಿಗ್ಗೆ ರಸ್ತೆ ಬದಿಯಲ್ಲಿ ನಿಂತಿದ್ದ ಲಾರಿಗೆ ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ಟಿಟಿ ವಾಹನ ಡಿಕ್ಕಿ ಹೊಡೆದ ಪರಿಣಾಮ ಓರ್ವ ಗಂಭೀರವಾಗಿ ಗಾಯಗೊಂಡಿದ್ದು, ಇತರ 13 ಮಂದಿಗೆ ಸಣ್ಣಪುಟ್ಟ ಗಾಯಗಳಾಗಿವೆ.

ಮುಂದೆ ಓದಿ →
ಸಿಂಧನೂರು ರಾಯಚೂರು

ಸಮುದಾಯ ಆರೋಗ್ಯ ಕೇಂದ್ರದಲ್ಲಿ 12 ವರ್ಷಗಳ ಬಳಿಕ ಉದರದರ್ಶಕ ಸಂತಾನಹರಣ ಶಸ್ತ್ರಚಿಕಿತ್ಸೆ ಪುನರಾರಂಭ

ಕಳೆದ 12 ವರ್ಷಗಳಿಂದ ಸ್ಥಗಿತಗೊಂಡಿದ್ದ ಉದರದರ್ಶಕ ಸಂತಾನಹರಣ ಶಸ್ತ್ರಚಿಕಿತ್ಸಾ ಸೇವೆಯನ್ನು ತುರ್ವಿಹಾಳ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಪುನರಾರಂಭಿಸಲಾಗಿದ್ದು, ಮೊದಲ ದಿನವೇ ಎಂಟು ಮಹಿಳೆಯರಿಗೆ ಯಶಸ್ವಿಯಾಗಿ ಶಸ್ತ್ರಚಿಕಿತ್ಸೆ ನೆರವೇರಿಸಲಾಗಿದೆ.

ಮುಂದೆ ಓದಿ →
ಸಿಂಧನೂರು ರಾಯಚೂರು

ದಲಿತರ ಮೇಲಿನ ದೌರ್ಜನ್ಯ ಖಂಡಿಸಿ ನವೆಂಬರ್ 8ರಂದು ‘ತಿಡಿಗೋಳ ಚಲೋ’ ಹೋರಾಟಕ್ಕೆ ಕರೆ

ತಾಲೂಕಿನ ತಿಡಿಗೋಳ ಗ್ರಾಮದಲ್ಲಿ ದಲಿತರ ಮೇಲೆ ನಡೆದಿರುವ ದೌರ್ಜನ್ಯ ಹಾಗೂ ಸಾಮಾಜಿಕ ಬಹಿಷ್ಕಾರದ ಆರೋಪಗಳನ್ನು ಖಂಡಿಸಿ ನವೆಂಬರ್ 8ರಂದು ‘ತಿಡಿಗೋಳ ಚಲೋ’ ಬೃಹತ್ ಪ್ರತಿಭಟನಾ ಹೋರಾಟ ಹಮ್ಮಿಕೊಳ್ಳಲಾಗಿದೆ ಎಂದು ದಲಿತ ಹಾಗೂ ಪ್ರಗತಿಪರ ಸಂಘಟನೆಗಳ ಒಕ್ಕೂಟದ ಮುಖಂಡ, ವಕೀಲ ಶೇಖರಪ್ಪ ದುಮತಿ ತಿಳಿಸಿದರು.

ಮುಂದೆ ಓದಿ →
ಸಿಂಧನೂರು ರಾಯಚೂರು

ಡಿಸೆಂಬರ್ ಅಂತ್ಯದವರೆಗೆ ಕಾಲುವೆಗೆ ನೀರು ಹರಿಸಲು ಆಗ್ರಹಿಸಿ ಸಿಂಧನೂರಿನಲ್ಲಿ ರೈತರ ಬೃಹತ್ ಪ್ರತಿಭಟನೆ

ತುಂಗಭದ್ರಾ ಜಲಾಶಯದ ಎಡದಂಡೆ ಕಾಲುವೆಗೆ ಡಿಸೆಂಬರ್ 31ರವರೆಗೆ ನಿರಂತರವಾಗಿ ನೀರು ಹರಿಸಬೇಕು ಎಂದು ಒತ್ತಾಯಿಸಿ ಸಿಂಧನೂರು ಹಾಗೂ ಮಸ್ಕಿ ತಾಲೂಕಿನ ರೈತರು ಮತ್ತು ವಿವಿಧ ಸಂಘಟನೆಗಳ ಮುಖಂಡರು 'ನಮ್ಮ ನೀರು ನಮ್ಮ ಹಕ್ಕು' ಘೋಷಣೆಯಡಿ ಬೃಹತ್ ಪ್ರತಿಭಟನೆಯನ್ನು ಮುಂದುವರಿಸಿದ್ದಾರೆ.

ಮುಂದೆ ಓದಿ →
ಸಿಂಧನೂರು ರಾಯಚೂರು

ಪರಿಸರ ಪ್ರೇಮಿ ಅಮರೇಗೌಡ ಮಲ್ಲಾಪುರ ಅವರಿಗೆ ‘ಪರಮ ಶ್ರೀ’ ಪ್ರಶಸ್ತಿ ಪ್ರದಾನ

ಪರಿಸರ ಸಂರಕ್ಷಣೆ ಹಾಗೂ ಹಸಿರೀಕರಣ ಕ್ಷೇತ್ರದಲ್ಲಿ ಸಲ್ಲಿಸುತ್ತಿರುವ ಸೇವೆಯನ್ನು ಗುರುತಿಸಿ ವನಸಿರಿ ಫೌಂಡೇಶನ್ ಅಧ್ಯಕ್ಷ, ಪರಿಸರ ಪ್ರೇಮಿ ಅಮರೇಗೌಡ ಮಲ್ಲಾಪುರ ಅವರಿಗೆ ತುರ್ವಿಹಾಳ ಪಟ್ಟಣದ ಶ್ರೀ ಸದ್ಗುರು ಸರ್ವೇಶ್ವರ ಮಠದ ವತಿಯಿಂದ 2026ನೇ ಸಾಲಿನ ಪ್ರತಿಷ್ಠಿತ ‘ಪರಮ ಶ್ರೀ’ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಮುಂದೆ ಓದಿ →
ಸಿಂಧನೂರು ರಾಯಚೂರು

ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಕ್ರೀಡಾಮನೋಭಾವ ಅಗತ್ಯ: ರಾಜಶೇಖರ್

ಸಿಂಧನೂರು, ಅ. 26: ವಿದ್ಯಾರ್ಥಿಗಳು ಶಿಕ್ಷಣದ ಜೊತೆಗೆ ಕ್ರೀಡಾ ಚಟುವಟಿಕೆಗಳಲ್ಲಿಯೂ ಸಕ್ರಿಯವಾಗಿ ಪಾಲ್ಗೊಳ್ಳಬೇಕು. ಸೋಲು-ಗೆಲುವನ್ನು ಸಮಾನವಾಗಿ ಸ್ವೀಕರಿಸುವ ಮನೋಭಾವ ಬೆಳೆಸಿಕೊಂಡು ಕ್ರೀಡಾಸ್ಫೂರ್ತಿಯಿಂದ ಸ್ಪರ್ಧೆಗಳಲ್ಲಿ ಭಾಗವಹಿಸಬೇಕು ಎಂದು ಸಿಂಧನೂರು ರೂರಲ್ ಸ್ಕೇಟಿಂಗ್ ಅಕಾಡೆಮಿಯ ಕಾರ್ಯದರ್ಶಿ ರಾಜಶೇಖರ್ ಹೇಳಿದರು.

ಮುಂದೆ ಓದಿ →
ಸಿಂಧನೂರು ರಾಯಚೂರು

ಲಾರಿ ಚಕ್ರಕ್ಕೆ ಸಿಲುಕಿ ಸ್ಕೂಟಿ ಸವಾರ ಸ್ಥಳದಲ್ಲೇ ಸಾವು

ನಗರದ ಗಂಗಾವತಿ ರಸ್ತೆಯಲ್ಲಿ ಕಾಂಟೇನರ್ ಲಾರಿಯ ಹಿಂಬದಿ ಚಕ್ರಕ್ಕೆ ಸ್ಕೂಟಿ ಸವಾರ ಸಿಲುಕಿ ಸ್ಥಳದಲ್ಲೇ ಮೃತಪಟ್ಟಿರುವ ದಾರುಣ ಘಟನೆ ನಡೆದಿದೆ.

ಮುಂದೆ ಓದಿ →
ಸಿಂಧನೂರು ರಾಯಚೂರು

ಬಾದರ್ಲಿ ಜಿ.ಪಂ. ಕ್ಷೇತ್ರದ ಕಾಂಗ್ರೆಸ್ ಟಿಕೆಟ್‌ಗೆ ಅರುಣಕುಮಾರ ನಾಯಕ ಪರ ಬೆಂಬಲಿಗರ ಒತ್ತಾಯ

ಮುಂಬರುವ ಜಿಲ್ಲಾ ಪಂಚಾಯಿತಿ ಚುನಾವಣೆಯಲ್ಲಿ ಪರಿಶಿಷ್ಟ ಪಂಗಡಕ್ಕೆ ಮೀಸಲಾಗಿರುವ ಬಾದರ್ಲಿ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಯುವ ಮುಖಂಡ ಅರುಣಕುಮಾರ ನಾಯಕ ಯಾಪಲಪರ್ವಿ ಅವರಿಗೆ ಟಿಕೆಟ್ ನೀಡಬೇಕು ಎಂದು ಕಾಂಗ್ರೆಸ್ ಯುವ ಮುಖಂಡ ಜಿ.

ಮುಂದೆ ಓದಿ →
ಸಿಂಧನೂರು ರಾಯಚೂರು

ಸಮುದಾಯ ಆರೋಗ್ಯ ಕೇಂದ್ರದಲ್ಲಿ ವಿಶ್ವ ಪೋಲಿಯೊ ದಿನಾಚರಣೆ

ತಾಲೂಕಿನ ತುರ್ವಿಹಾಳ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ರಾಯಚೂರು, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ತಾಲೂಕು ಆರೋಗ್ಯ ಅಧಿಕಾರಿಗಳ ಕಾರ್ಯಾಲಯ ಸಿಂಧನೂರು, ತುರ್ವಿಹಾಳ ಸಮುದಾಯ ಆರೋಗ್ಯ ಕೇಂದ್ರ ಹಾಗೂ ಸಿಂಧನೂರಿನ ಸನ್‌ರೈಸ್ ಪ್ಯಾರಾಮೆಡಿಕಲ್ ಕಾಲೇಜಿನ ಸಂಯುಕ್ತ ಆಶ್ರಯದಲ್ಲಿ ವಿಶ್ವ ಪೋಲಿಯೊ ದಿನಾಚರಣೆ…

ಮುಂದೆ ಓದಿ →
ಸಿಂಧನೂರು ರಾಯಚೂರು

ಅನಾಥ ವೃದ್ಧೆಯ ಅಂತ್ಯಸಂಸ್ಕಾರ ನೆರವೇರಿಸಿ ಮಾನವೀಯತೆ ಮೆರೆದ ಭೂತಲದಿನ್ನಿ ಗ್ರಾಮಸ್ಥರು

ಹಲವು ವರ್ಷಗಳಿಂದ ಭೂತಲದಿನ್ನಿ ಗ್ರಾಮದಲ್ಲಿ ಆಶ್ರಯ ಪಡೆದಿದ್ದ ಅನಾಥ ವೃದ್ಧೆ ಸುಶೀಲಮ್ಮ (ಜೋಗಮ್ಮ) (73) ಅವರ ನಿಧನದ ಹಿನ್ನೆಲೆಯಲ್ಲಿ ಗ್ರಾಮಸ್ಥರೆಲ್ಲರೂ ಒಗ್ಗೂಡಿ ಧಾರ್ಮಿಕ ವಿಧಿವಿಧಾನಗಳೊಂದಿಗೆ ಅಂತ್ಯಸಂಸ್ಕಾರ ನೆರವೇರಿಸುವ ಮೂಲಕ ಮಾನವೀಯತೆ ಮೆರೆದಿದ್ದಾರೆ.

ಮುಂದೆ ಓದಿ →
ಸಿಂಧನೂರು ರಾಯಚೂರು

ಎರಡು ತಿಂಗಳ ಹಸುಗೂಸಿನ ಹೊಟ್ಟೆಯಲ್ಲಿ ಮತ್ತೊಂದು ಭ್ರೂಣ ಪತ್ತೆ! ವೈದ್ಯಕೀಯ ಲೋಕಕ್ಕೆ ಅಚ್ಚರಿ ಮೂಡಿಸಿದ ಅಪರೂಪದ ಪ್ರಕರಣ

ಕೇವಲ ಎರಡು ತಿಂಗಳ ಗಂಡು ಮಗುವಿನ ಹೊಟ್ಟೆಯೊಳಗೆ ಮತ್ತೊಂದು ಭ್ರೂಣ ಪತ್ತೆಯಾಗಿರುವ ಅಪರೂಪದ ವೈದ್ಯಕೀಯ ಪ್ರಕರಣ ಬೆಳಕಿಗೆ ಬಂದಿದ್ದು, ವೈದ್ಯಕೀಯ ವಲಯದಲ್ಲಿ ತೀವ್ರ ಕುತೂಹಲ ಮೂಡಿಸಿದೆ.

ಮುಂದೆ ಓದಿ →
ಸಿಂಧನೂರು ರಾಯಚೂರು

ರಾಜ್ಯ ಪತ್ರಕರ್ತರ ಸಮ್ಮೇಳನ ಯಶಸ್ಸಿಗೆ ಎಲ್ಲರೂ ಸಕ್ರಿಯವಾಗಿ ಕೈಜೋಡಿಸಿ: ಆರ್. ಗುರುನಾಥ್

ರಾಯಚೂರಿನಲ್ಲಿ ಡಿಸೆಂಬರ್ ತಿಂಗಳಲ್ಲಿ ನಡೆಯಲಿರುವ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ 41ನೇ ರಾಜ್ಯ ಸಮ್ಮೇಳನವನ್ನು ಯಶಸ್ವಿಗೊಳಿಸಲು ಜಿಲ್ಲೆಯ ಎಲ್ಲ ಪತ್ರಕರ್ತರು ಒಗ್ಗಟ್ಟಿನಿಂದ ಶ್ರಮಿಸಬೇಕು ಎಂದು ಸಂಘದ ಜಿಲ್ಲಾಧ್ಯಕ್ಷ ಆರ್.

ಮುಂದೆ ಓದಿ →
ಸಿಂಧನೂರು ರಾಯಚೂರು

ಅಯೋಡಿನ್ ಕೊರತೆ ತಡೆಗಟ್ಟಲು ಅಯೋಡಿನ್‌ಯುಕ್ತ ಉಪ್ಪು ಬಳಸಿ: ಬಾಲಪ್ಪ ನಾಯಕ

ಅಯೋಡಿನ್ ಕೊರತೆಯಿಂದ ಉಂಟಾಗುವ ಆರೋಗ್ಯ ಸಮಸ್ಯೆಗಳನ್ನು ತಡೆಗಟ್ಟಲು ಪ್ರತಿಯೊಂದು ಕುಟುಂಬವೂ ಅಯೋಡಿನ್‌ಯುಕ್ತ ಉಪ್ಪಿನ ಬಳಕೆಗೆ ಆದ್ಯತೆ ನೀಡಬೇಕು ಎಂದು ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಬಾಲಪ್ಪ ನಾಯಕ ತಿಳಿಸಿದರು.

ಮುಂದೆ ಓದಿ →
ಸಿಂಧನೂರು ರಾಯಚೂರು

ರೈತರು, ಕೃಷಿ ಕೂಲಿಕಾರರ ಹಕ್ಕುಗಳಿಗಾಗಿ ಅ.24ರಿಂದ ಪಾದಯಾತ್ರೆ, 27ರಂದು ಜಿಲ್ಲಾಧಿಕಾರಿ ಕಚೇರಿ ಎದುರು ಧರಣಿ

ಭೂಮಿ, ಮನೆ, ನಿವೇಶನ, ಉದ್ಯೋಗ ಖಾತ್ರಿ, ಕುಡಿಯುವ ನೀರು, ಬರ ಪರಿಹಾರ ಹಾಗೂ ವಿದ್ಯುತ್ ಸಮಸ್ಯೆ ಸೇರಿದಂತೆ ರೈತರು ಮತ್ತು ಕೃಷಿ ಕೂಲಿಕಾರರ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಅಕ್ಟೋಬರ್ 24ರಿಂದ ಜಿಲ್ಲೆಯ ವಿವಿಧ ತಾಲೂಕುಗಳ ಮೂಲಕ ಪಾದಯಾತ್ರೆ ನಡೆಸಿ, ಅಕ್ಟೋಬರ್ 27ರಂದು ರಾಯಚೂರು ಜಿಲ್ಲಾಧಿಕಾರಿ ಕಚೇರಿ ಎದುರು ಧರಣಿ…

ಮುಂದೆ ಓದಿ →
ಸಿಂಧನೂರು ರಾಯಚೂರು

ರಾಜ್ಯ ಸರ್ಕಾರಿ ಮಹಿಳಾ ನೌಕರರ ಸಂಘದ ಅಧ್ಯಕ್ಷರಾಗಿ ಪದ್ಮಾ ಸಜ್ಜನ್, ಪ್ರಧಾನ ಕಾರ್ಯದರ್ಶಿಯಾಗಿ ಸರಸ್ವತಿ ಆಯ್ಕೆ

ಕರ್ನಾಟಕ ರಾಜ್ಯ ಸರ್ಕಾರಿ ಮಹಿಳಾ ನೌಕರರ ಸಂಘದ ನೂತನ ಅಧ್ಯಕ್ಷರಾಗಿ ಪದವೀಧರ ಶಿಕ್ಷಣ ಇಲಾಖೆಯ ಪದ್ಮಾ ಸಜ್ಜನ್ ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ಸರಸ್ವತಿ ಬಾಯಪ್ಪ ಕಡ್ಡೋಣಿ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಸಂಘದ ಜಿಲ್ಲಾ ಘಟಕದ ಅಧ್ಯಕ್ಷೆ ಜಯಶ್ರೀ ತಿಳಿಸಿದ್ದಾರೆ.

ಮುಂದೆ ಓದಿ →