ಗ್ರಾಮೀಣ ಪ್ರದೇಶಗಳಲ್ಲಿ ರಸ್ತೆ ಸಂಪರ್ಕ ವ್ಯವಸ್ಥೆಯನ್ನು ಬಲಪಡಿಸುವ ಹಾಗೂ ಮೂಲಸೌಕರ್ಯಗಳನ್ನು ಅಭಿವೃದ್ಧಿಪಡಿಸುವ ಉದ್ದೇಶದಿಂದ ರಾಯಚೂರು ಗ್ರಾಮೀಣ ವಿಧಾನಸಭಾ ಕ್ಷೇತ್ರದ ಶಾಸಕ ಬಸನಗೌಡ ದದ್ದಲ್ ಅವರು ಮೀರಾಪುರ ಗ್ರಾಮದಲ್ಲಿ ಒಟ್ಟು ₹7.05 ಕೋಟಿ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಭೂಮಿಪೂಜೆ ನೆರವೇರಿಸಿ ಚಾಲನೆ ನೀಡಿದರು.
ರೈತರ ಬೆಳೆಗಳಿಗೆ ವೈಜ್ಞಾನಿಕ ಬೆಂಬಲ ಬೆಲೆ ನಿಗದಿಪಡಿಸಲು ಆಗ್ರಹ ರಾಯಚೂರು: ರೈತರು ಉತ್ಪಾದಿಸುವ ಎಲ್ಲ ಕೃಷಿ ಬೆಳೆಗಳಿಗೆ ಸ್ವಾಮಿನಾಥನ್ ಆಯೋಗದ ಶಿಫಾರಸಿನಂತೆ ಸಮಗ್ರ ಉತ್ಪಾದನಾ ವೆಚ್ಚದ ಮೇಲೆ ಶೇ.50ರಷ್ಟು ಲಾಭಾಂಶ ಸೇರಿಸಿ ವೈಜ್ಞಾನಿಕ ಕನಿಷ್ಠ ಬೆಂಬಲ ಬೆಲೆ ನಿಗದಿಪಡಿಸಬೇಕು.
ಕನ್ನಡ ಸಾಹಿತ್ಯ ಲೋಕಕ್ಕೆ ತಮ್ಮದೇ ಆದ ವಿಶಿಷ್ಟ ಕೊಡುಗೆ ನೀಡಿರುವ ಹಿರಿಯ ಸಾಹಿತಿ ವೀರಹನುಮಾನ ಅವರಿಗೆ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಲಭಿಸಿರುವುದು ರಾಯಚೂರು ಜಿಲ್ಲೆಯ ಸಮಸ್ತ ಸಾಹಿತಿಗಳಿಗೆ ಸಂದ ಗೌರವವಾಗಿದೆ.
ಜಿಲ್ಲೆಯಲ್ಲಿ ಇತ್ತೀಚೆಗೆ ನಡೆದ ದಲಿತ ಮುಖಂಡ ಭೂಮಾನಂದ ಅವರ ಹತ್ಯೆ ಹಾಗೂ ಅಶ್ವಿನಿ ಒಕ್ರಾಣಿ ಮತ್ತು ರಾಣಮ್ಮ ಕರಡಕಲ್ ಅವರ ಮೇಲಿನ ಅತ್ಯಾಚಾರ ಮತ್ತು ಕೊಲೆ ಪ್ರಕರಣಗಳ ತನಿಖೆಯನ್ನು ಅಪರಾಧ ತನಿಖಾ ಇಲಾಖೆಗೆ (ಸಿಐಡಿ) ಹಸ್ತಾಂತರಿಸಬೇಕು.
ನಗರದ ಐತಿಹಾಸಿಕ ಕೋಟೆ, ರಾಜಕಾಲುವೆ, ಕಂದಕಗಳು ಹಾಗೂ ಪುರಾತತ್ವ ಇಲಾಖೆಗೆ ಸಂಬಂಧಿಸಿದ ಸಾರ್ವಜನಿಕ ಆಸ್ತಿಗಳನ್ನು ಖಾಸಗಿ ವ್ಯಕ್ತಿಗಳು ಅಕ್ರಮವಾಗಿ ಅತಿಕ್ರಮಿಸಿಕೊಂಡಿದ್ದು, ಇಂತಹ ಜಾಗಗಳನ್ನು ಗುರುತಿಸಿ ಸಂರಕ್ಷಿಸಲು ಜಿಲ್ಲಾಡಳಿತ ಕೂಡಲೇ ಕ್ರಮ ಕೈಗೊಳ್ಳಬೇಕು.
ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್) ಪ್ರಕ್ರಿಯೆಯನ್ನು ವಿರೋಧಿಸುತ್ತಿರುವ ಕಾಂಗ್ರೆಸ್ ಪಕ್ಷ ಹಾಗೂ ರಾಜ್ಯ ಸರ್ಕಾರದ ನಿಲುವಿನ ವಿರುದ್ಧ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಭಾರತೀಯ ಜನತಾ ಪಕ್ಷದ ವತಿಯಿಂದ ಬೃಹತ್ ಪ್ರತಿಭಟನಾ ಪಾದಯಾತ್ರೆ ಹಮ್ಮಿಕೊಳ್ಳಲಾಯಿತು.
ಪರಿಸರ ಸಂರಕ್ಷಣೆ ಪ್ರತಿಯೊಬ್ಬ ನಾಗರಿಕನ ಕರ್ತವ್ಯವಾಗಿದ್ದು, ಗಿಡಮರಗಳನ್ನು ನೆಟ್ಟು ಪೋಷಿಸುವ ಮೂಲಕ ಮುಂದಿನ ಪೀಳಿಗೆಗೆ ಸ್ವಚ್ಛ, ಸುಂದರ ಹಾಗೂ ಆರೋಗ್ಯಕರ ಪರಿಸರವನ್ನು ಉಳಿಸಿಕೊಡಬೇಕು ಎಂದು ಅತಿಥಿ ಶಿಕ್ಷಕರ ಸಂಘದ ಅಧ್ಯಕ್ಷ ಜಿ.ಕೆ.
ನಾಡಿನ ಕಲೆ, ಸಂಸ್ಕೃತಿ ಹಾಗೂ ಜಾನಪದ ಪರಂಪರೆಯನ್ನು ಪರಿಚಯಿಸುವ ಉದ್ದೇಶದಿಂದ ಕಲಾ ಸಂಕುಲ ಸಂಸ್ಥೆಯ ವತಿಯಿಂದ ನವೆಂಬರ್ 8ರಂದು ಭಾನುವಾರ ನಗರದ ರಂಗಮಂದಿರದಲ್ಲಿ ‘ದೇಸಿ ಸಂಭ್ರಮ’ ಸಾಂಸ್ಕೃತಿಕ ಕಾರ್ಯಕ್ರಮ ಹಾಗೂ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಿಗೆ ಗೌರವ ಸನ್ಮಾನ ಸಮಾರಂಭ ಹಮ್ಮಿಕೊಳ್ಳಲಾಗಿದೆ ಎಂದು ಸಂಸ್ಥೆಯ ಕಾರ್ಯದರ್ಶಿ ಮಾರುತಿ…
ರಾಯಚೂರು ಗ್ರಾಮೀಣ ವಿಧಾನಸಭಾ ಕ್ಷೇತ್ರದ ಹರನಹಳ್ಳಿ ಗ್ರಾಮದಲ್ಲಿ ಕೃಷಿ ಕೆಲಸದಲ್ಲಿ ನಿರತರಾಗಿದ್ದ ವೇಳೆ ಸಿಡಿಲು ಬಡಿದು ಮೃತಪಟ್ಟ ರೈತ ಪ್ರಭಣ್ಣ ಅವರ ಕುಟುಂಬಕ್ಕೆ ಶಾಸಕ ಬಸನಗೌಡ ದದ್ದಲ್ ಸರ್ಕಾರದ ವತಿಯಿಂದ ₹5 ಲಕ್ಷ ಪರಿಹಾರ ವಿತರಿಸಿ, ಕುಟುಂಬದ ಸದಸ್ಯರಿಗೆ ಸಾಂತ್ವನ ಹೇಳಿದರು.
ರಾಯಚೂರು, ನ.5: ಹನ್ನೆರಡನೇ ಶತಮಾನದ ವಚನ ಸಾಹಿತ್ಯವು ಕೇವಲ ಧಾರ್ಮಿಕ ಚಳವಳಿಗೆ ಸೀಮಿತವಾಗದೆ, ಸಮಾಜದಲ್ಲಿದ್ದ ಮೂಢನಂಬಿಕೆ, ಜಾತೀಯತೆ, ಅಸಮಾನತೆ ಹಾಗೂ ಲಿಂಗಭೇದದ ವಿರುದ್ಧ ಜನಜಾಗೃತಿ ಮೂಡಿಸಿದ ಮಹತ್ವದ ವೈಚಾರಿಕ ಕ್ರಾಂತಿಯಾಗಿದೆ ಎಂದು ಲಿಂಗಸುಗೂರು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥ ಪ್ರೊ.
ರಾಯಚೂರು ಜಿಲ್ಲೆಯ ಯುವಕ-ಯುವತಿಯರು ಕೇವಲ ಜಿಲ್ಲೆಯೊಳಗೆ ಮಾತ್ರ ಸ್ಪರ್ಧಿಸುವುದಕ್ಕೆ ಸೀಮಿತವಾಗದೆ, ಇತರೆ ಜಿಲ್ಲೆಗಳ ಅಭ್ಯರ್ಥಿಗಳೊಂದಿಗೆ ಸಮರ್ಥವಾಗಿ ಪೈಪೋಟಿ ನಡೆಸಿ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಯಶಸ್ಸು ಸಾಧಿಸಬೇಕು.
ದೇವದುರ್ಗ ತಾಲೂಕಿನ ಗಬ್ಬೂರು ಸರ್ಕಾರಿ ಪದವಿ ಪೂರ್ವ ಕಾಲೇಜಿನ ಸಮಾಜಶಾಸ್ತ್ರ ಹಾಗೂ ಅರ್ಥಶಾಸ್ತ್ರ ಉಪನ್ಯಾಸಕರನ್ನು ವಾರದಲ್ಲಿ ಮೂರು ದಿನ ಬೇರೆ ಕಾಲೇಜುಗಳಿಗೆ ನಿಯೋಜಿಸಿರುವ ಆದೇಶವನ್ನು ಕೂಡಲೇ ಹಿಂಪಡೆಯಬೇಕು ಎಂದು ಮಾನವ ಹಕ್ಕುಗಳ ರಕ್ಷಣೆ ಹಾಗೂ ಭ್ರಷ್ಟಾಚಾರ ನಿರ್ಮೂಲನಾ ಸೇವಾ ಸಮಿತಿಯ ಜಿಲ್ಲಾ ಯುವ ಘಟಕದ ಅಧ್ಯಕ್ಷ ಅಲ್ಲಾವಲಿ…
ರಾಯಚೂರು: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಮೀಸಲಾತಿ ಪ್ರಮಾಣ ಹೆಚ್ಚಳಕ್ಕೆ ಸಂಬಂಧಿಸಿದ ಹಿಂದಿನ ಸರ್ಕಾರದ ಆದೇಶವನ್ನು ಹೈಕೋರ್ಟ್ ರದ್ದುಗೊಳಿಸಿರುವುದನ್ನು ವಿರೋಧಿಸಿ, ರಾಜ್ಯ ಸರ್ಕಾರ ತಕ್ಷಣ ಸುಪ್ರೀಂ ಕೋರ್ಟ್ಗೆ ಮೇಲ್ಮನವಿ ಸಲ್ಲಿಸಬೇಕು ಹಾಗೂ ಹೆಚ್ಚುವರಿ ಮೀಸಲಾತಿಗೆ ಸಂವಿಧಾನಾತ್ಮಕ ರಕ್ಷಣೆ ಕಲ್ಪಿಸಬೇಕು ಎಂದು ಒತ್ತಾಯಿಸಿ ಕರ್ನಾಟಕ…
ತಿಡಿಗೋಳ ಗ್ರಾಮದ ಆಂಜನೇಯ ಸ್ವಾಮಿ ಜಾತ್ರೆಯ ಸಂದರ್ಭದಲ್ಲಿ ಯುವಕರ ನಡುವೆ ನಡೆದ ಸಣ್ಣಪುಟ್ಟ ವಾಗ್ವಾದವನ್ನು ಅನಗತ್ಯವಾಗಿ ದೊಡ್ಡ ವಿವಾದವನ್ನಾಗಿ ಬಿಂಬಿಸಿ, ಗ್ರಾಮದ ಶಾಂತಿ ಮತ್ತು ಸೌಹಾರ್ದತೆಗೆ ಧಕ್ಕೆ ತರುವ ರೀತಿಯಲ್ಲಿ ಅಪಪ್ರಚಾರ ಮಾಡಲಾಗುತ್ತಿದೆ ಎಂದು ಗ್ರಾಮದ ಮುಖಂಡ ಅಮರೇಶ ಗಚ್ಚಿನಮನೆ ಆರೋಪಿಸಿದರು.
ರಾಯಚೂರು: ಸಮಾಜದ ಅಂಕುಡೊಂಕುಗಳನ್ನು ತಿದ್ದುವ ಹಾಗೂ ಜನರಲ್ಲಿ ವೈಚಾರಿಕ ಪ್ರಜ್ಞೆ ಮೂಡಿಸುವ ಶಕ್ತಿ ರಂಗಭೂಮಿಗಿದೆ. ಇಂತಹ ಅರ್ಥಪೂರ್ಣ ಕಲೆಯನ್ನು ಉಳಿಸಿ ಬೆಳೆಸಲು ಕಲಾವಿದರ ಪರಿಶ್ರಮದ ಜೊತೆಗೆ ಪ್ರೇಕ್ಷಕರು ಹಾಗೂ ಕಲಾಭಿಮಾನಿಗಳ ನಿರಂತರ ಸಹಕಾರ ಅಗತ್ಯವಾಗಿದೆ ಎಂದು ಹಿರಿಯ ರಂಗಭೂಮಿ ಕಲಾವಿದ ವಿ.ಎನ್. ಅಕ್ಕಿ ಅಭಿಪ್ರಾಯಪಟ್ಟರು.
ಭಾರತೀಯ ಶಾಸ್ತ್ರೀಯ ಸಂಗೀತ ಹಾಗೂ ಸಾಂಪ್ರದಾಯಿಕ ನೃತ್ಯಕಲೆಗಳ ಸಂರಕ್ಷಣೆ ಮತ್ತು ಉತ್ತೇಜನದ ಉದ್ದೇಶದಿಂದ ನವೆಂಬರ್ 7ರಂದು ನಗರದ ಪಂಡಿತ ಸಿದ್ಧರಾಮ ಜಂಬಲದಿನ್ನಿ ರಂಗಮಂದಿರದಲ್ಲಿ ‘ಶಂಭಲ ಮಾಸ್ಟರ್ಸ್ ಸಂಗೀತ ಸಮ್ಮೇಳನ’ ಆಯೋಜಿಸಲಾಗಿದೆ ಎಂದು ವಿಶ್ವ ಕುಂಡಲಿನಿ ಸಂಘದ ಅಧ್ಯಕ್ಷ ಸ್ವಾಮಿ ಜ್ಞಾನಪ್ರಭು ತಿಳಿಸಿದರು.
ನಗರದ ಜಹೀರಾಬಾದ್ ಕಾಲೋನಿಯಲ್ಲಿರುವ ನೂರ್ ಷಾ ದರ್ಗಾಕ್ಕೆ ಸಂಬಂಧಿಸಿದ ವಕ್ಫ್ ಆಸ್ತಿಯ 1.11 ಎಕರೆ ಜಮೀನನ್ನು ನಕಲಿ ದಾಖಲೆಗಳ ಮೂಲಕ ಖಾಸಗಿ ಶಿಕ್ಷಣ ಸಂಸ್ಥೆಗೆ ಮಾರಾಟ ಮಾಡಲಾಗಿದೆ ಎಂದು ರಾಯಚೂರು ವಕ್ಫ್ ರಕ್ಷಣಾ ಸಮಿತಿಯ ಅಕ್ಬರ್ ಹುಸೇನ್ ನಾಗುಂಡಿ ಗಂಭೀರ ಆರೋಪ ಮಾಡಿದರು.
ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಗೆ ಭಾಜನರಾಗಿರುವ ಹಿರಿಯ ಸಾಹಿತಿ ಹಾಗೂ ಹೈಕು ಕವಿ ವೀರ ಹನುಮಾನ್ ಅವರನ್ನು ನಗರದ ಕನ್ನಡ ಭವನದಲ್ಲಿ ಬುಧವಾರ ಸಂಜೆ ಸಾಹಿತಿಗಳು, ಶಿಕ್ಷಕರು, ಕನ್ನಡಪರ ಸಂಘಟನೆಗಳ ಮುಖಂಡರು ಹಾಗೂ ಸಾಹಿತ್ಯಾಸಕ್ತರು ಆತ್ಮೀಯವಾಗಿ ಸನ್ಮಾನಿಸಿ ಗೌರವಿಸಿದರು.
ನಗರದ ಐತಿಹಾಸಿಕ ಮಾವಿನಕೆರೆ ಅಭಿವೃದ್ಧಿ ಹೆಸರಿನಲ್ಲಿ ಕಳೆದ 15 ವರ್ಷಗಳಿಂದ ಕೋಟ್ಯಂತರ ರೂಪಾಯಿ ಅನುದಾನ ಖರ್ಚು ಮಾಡಲಾಗಿದ್ದರೂ ಕೆರೆಯ ಸ್ಥಿತಿಯಲ್ಲಿ ಯಾವುದೇ ಗಮನಾರ್ಹ ಸುಧಾರಣೆಯಾಗಿಲ್ಲ.