ರಾಯಚೂರು, ನ. 5: ರಾಜ್ಯ ಸರ್ಕಾರ ಹಾಲು ಹಾಗೂ ಬಸ್ ಪ್ರಯಾಣ ದರವನ್ನು ಹೆಚ್ಚಿಸಿರುವುದನ್ನು ಖಂಡಿಸಿ, ದರ ಏರಿಕೆಯನ್ನು ಕೂಡಲೇ ಹಿಂಪಡೆಯಬೇಕು ಎಂದು ಆಗ್ರಹಿಸಿ ಕರ್ನಾಟಕ ರಾಷ್ಟ್ರ ಸಮಿತಿ (ಕೆಆರ್ಎಸ್) ಪಕ್ಷದ ವತಿಯಿಂದ ನಗರದ ಡಾ. ಬಿ.ಆರ್. ಅಂಬೇಡ್ಕರ್ ವೃತ್ತದಲ್ಲಿ ಪ್ರತಿಭಟನೆ ನಡೆಸಲಾಯಿತು.
ರಾಯಚೂರು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ನವೆಂಬರ್ 14 ಮತ್ತು 15ರಂದು ನಗರದ ಪಂಡಿತ್ ಸಿದ್ದರಾಮ ಜಂಬಲದಿನ್ನಿ ರಂಗಮಂದಿರದಲ್ಲಿ ಆಯೋಜಿಸಲಾಗಿರುವ 12ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಆಯ್ಕೆಯಾಗಿರುವ ರಾಷ್ಟ್ರ ಮತ್ತು ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಹಿರಿಯ ಸಾಹಿತಿ ರಾಮಣ್ಣ ಹವಳೆ…
ಜಿಲ್ಲೆಯಲ್ಲಿ ಬಾಲ್ಯವಿವಾಹ ಪದ್ಧತಿಯನ್ನು ಸಂಪೂರ್ಣವಾಗಿ ನಿರ್ಮೂಲನೆ ಮಾಡಿ, ಮಕ್ಕಳ ಹಕ್ಕುಗಳು ಹಾಗೂ ಉಜ್ವಲ ಭವಿಷ್ಯವನ್ನು ರಕ್ಷಿಸುವ ಉದ್ದೇಶದಿಂದ ಮಾರ್ಗದರ್ಶಿ ಸೊಸೈಟಿ ವತಿಯಿಂದ ಹಮ್ಮಿಕೊಂಡಿರುವ ‘ಬಾಲ್ಯವಿವಾಹ ಮುಕ್ತ ರಾಯಚೂರು’ 100 ದಿನಗಳ ವಿಶೇಷ ಜಾಗೃತಿ ಅಭಿಯಾನದ ಬ್ಯಾನರ್ ಹಾಗೂ ಪೋಸ್ಟರ್ಗಳನ್ನು ಹೆಚ್ಚುವರಿ ಜಿಲ್ಲಾ ಪೊಲೀಸ್…
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಸಮುದಾಯದ ಜನರಲ್ಲಿ ಸಂವಿಧಾನಿಕ ಹಕ್ಕುಗಳು, ಸಾಮಾಜಿಕ ಸಮಾನತೆ, ದೌರ್ಜನ್ಯ ತಡೆ ಕಾಯ್ದೆ ಹಾಗೂ ಸರ್ಕಾರದ ವಿವಿಧ ಕಲ್ಯಾಣ ಯೋಜನೆಗಳ ಕುರಿತು ಅರಿವು ಮೂಡಿಸುವ ಉದ್ದೇಶದಿಂದ ತಾಲೂಕಿನ ಆತಕೂರು ಗ್ರಾಮದಲ್ಲಿ ತಾಲೂಕು ಮಟ್ಟದ ದೌರ್ಜನ್ಯ ತಡೆ ಸಮಿತಿ ವತಿಯಿಂದ ವಿಶೇಷ ಜಾಗೃತಿ ಕಾರ್ಯಕ್ರಮ…
ರಾಯಚೂರು: ನಗರದ ಸೀಮಾಂತರದ ಸರ್ವೆ ನಂ. 911/7ರ ಜಮೀನಿನ ವಿಸ್ತೀರ್ಣವನ್ನು ಭೂ ದಾಖಲೆಗಳಲ್ಲಿ ತಪ್ಪಾಗಿ ನಮೂದಿಸಲಾಗಿದ್ದು, ಹಲವು ಬಾರಿ ಮನವಿ ಸಲ್ಲಿಸಿದರೂ ತಿದ್ದುಪಡಿ ಮಾಡದೆ ನಿರ್ಲಕ್ಷ್ಯ ವಹಿಸಲಾಗಿದೆ ಎಂದು ಆರೋಪಿಸಿ ಭೂ ದಾಖಲೆಗಳ ಉಪನಿರ್ದೇಶಕರ ಕಚೇರಿ ವಿರುದ್ಧ ರೂಪಾ ಶ್ರೀನಿವಾಸ ನಾಯಕ ದೂರು ಸಲ್ಲಿಸಿದ್ದಾರೆ.
ಕನ್ನಡ ಚಿತ್ರರಂಗದ ಹಿರಿಯ ನಟ ಶಶಿಕುಮಾರ್ ಅವರ ಪುತ್ರ, ಯುವ ನಟ ಆದಿತ್ಯ ಶಶಿಕುಮಾರ್ ಅವರು ತಮ್ಮ ಮುಂಬರುವ ‘ರಾಶಿ’ ಚಿತ್ರದ ನಿರ್ಮಾಪಕ ಅಖಿಲೇಶ್ ಹಾಗೂ ಚಿತ್ರತಂಡದ ಸದಸ್ಯರೊಂದಿಗೆ ಬುಧವಾರ ನಗರದ ಓಂ ಸಾಯಿ ಧ್ಯಾನ ಮಂದಿರಕ್ಕೆ ಭೇಟಿ ನೀಡಿ ಶಿರಡಿ ಸಾಯಿಬಾಬಾ ಅವರ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು.
ಮಾದಕ ವಸ್ತುಗಳು, ತಂಬಾಕು ಹಾಗೂ ಇತರ ವ್ಯಸನಗಳು ಯುವಜನರ ಭವಿಷ್ಯಕ್ಕೆ ಮಾರಕವಾಗಿದ್ದು, ಪ್ರತಿಯೊಬ್ಬರೂ ದುಶ್ಚಟಗಳಿಂದ ದೂರವಿದ್ದು ಆರೋಗ್ಯಕರ ಜೀವನ ನಡೆಸುವ ಮೂಲಕ ನಶೆಮುಕ್ತ ರಾಯಚೂರು ನಿರ್ಮಾಣಕ್ಕೆ ಸಹಕರಿಸಬೇಕು ಎಂದು ಜಿಲ್ಲಾಧಿಕಾರಿ ಪೂವಿತಾ ಎಸ್.
ರಾಯಚೂರು, ನ.4: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹಾಗೂ ವಿಧಾನ ಪರಿಷತ್ ಪ್ರತಿಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಕಾಂಗ್ರೆಸ್ ನಾಯಕರ ವಿರುದ್ಧ ಅವಹೇಳನಕಾರಿ ಹಾಗೂ ಪ್ರಚೋದನಾತ್ಮಕ ಹೇಳಿಕೆಗಳನ್ನು ನೀಡುತ್ತಿರುವುದು ಖಂಡನೀಯ.
ಕರ್ನಾಟಕದಲ್ಲಿ ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ (ಎಸ್ಐಆರ್) ಪ್ರಕ್ರಿಯೆಯಡಿ ಒಂದು ಕೋಟಿಗೂ ಅಧಿಕ ಮತದಾರರ ಹೆಸರುಗಳನ್ನು ಪಟ್ಟಿಯಿಂದ ಕೈಬಿಡಲಾಗಿದೆ ಎಂದು ಆರೋಪಿಸಿರುವ ಎಸ್ಐಆರ್ ವಿರೋಧಿ ಹೋರಾಟ ಸಮಿತಿಯ ಸಂಚಾಲಕ ಮಾರೆಪ್ಪ ಹರ್ವಿ, ರಾಜ್ಯ ಸರ್ಕಾರವು ಎಸ್ಐಆರ್ ಅಂತಿಮ ಪಟ್ಟಿಯನ್ನು ತಿರಸ್ಕರಿಸಿ, ಮುಂಬರುವ ಸ್ಥಳೀಯ…
ರಾಯಚೂರು, ನ.4: ಮುಂಬರುವ ಜಿಲ್ಲಾ ಪಂಚಾಯಿತಿ ಹಾಗೂ ತಾಲೂಕು ಪಂಚಾಯಿತಿ ಚುನಾವಣೆಗಳಲ್ಲಿ ನ್ಯಾಯಮೂರ್ತಿ ಕೆ. ಭಕ್ತವತ್ಸಲ ಆಯೋಗದ ಶಿಫಾರಸು ಮತ್ತು ರಾಜ್ಯ ಸಚಿವ ಸಂಪುಟದ ತೀರ್ಮಾನಕ್ಕೆ ಅನುಗುಣವಾಗಿ ಇತರ ಹಿಂದುಳಿದ ವರ್ಗಗಳಿಗೆ ಶೇ.32ರಷ್ಟು ಮೀಸಲಾತಿ ಕಲ್ಪಿಸಬೇಕು.
ರಾಯಚೂರು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ನವೆಂಬರ್ 14 ಮತ್ತು 15ರಂದು ನಗರದ ಪಂಡಿತ ಸಿದ್ಧರಾಮ ಜಂಬಲದಿನ್ನಿ ರಂಗಮಂದಿರದಲ್ಲಿ ಆಯೋಜಿಸಿರುವ 12ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಸಕಲ ಸಿದ್ಧತೆಗಳನ್ನು ಕೈಗೊಳ್ಳಲಾಗಿದ್ದು, ಜಿಲ್ಲೆಯ ಸಾಹಿತಿಗಳು, ಕನ್ನಡಾಭಿಮಾನಿಗಳು, ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು…
ನಗರದ ಎಲ್ಬಿಎಸ್ ನಗರದಲ್ಲಿ ನಡೆದ ಉದ್ಯಮಿ ಬಾಪುರು ನರಸಿಂಹಯ್ಯ ಅವರ ಕೊಲೆ ಪ್ರಕರಣದ ಪ್ರಮುಖ ಆರೋಪಿ ತಿಲಕ್ ಸಿಂಗ್ನನ್ನು ಕ್ಷಿಪ್ರವಾಗಿ ಬಂಧಿಸಿದ ಪೊಲೀಸ್ ಇಲಾಖೆಯ ಕಾರ್ಯವೈಖರಿಯನ್ನು ರಾಯಚೂರು ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆ (ಆರ್ಡಿಸಿಸಿಐ) ಶ್ಲಾಘಿಸಿದ್ದು, ವ್ಯಾಪಾರಿಗಳು ಹಾಗೂ ಸಾರ್ವಜನಿಕರ ಸುರಕ್ಷತೆಗಾಗಿ ನಗರದಲ್ಲಿ…
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಜನರ ಸಮಸ್ಯೆಗಳನ್ನು ಆಲಿಸಿ, ಅವರಿಗೆ ನ್ಯಾಯ ಒದಗಿಸುವ ಉದ್ದೇಶದಿಂದ ರಾಜ್ಯದ ಪ್ರತಿಯೊಂದು ಜಿಲ್ಲೆಯಲ್ಲಿಯೂ ಸಾಮಾಜಿಕ ನ್ಯಾಯ ಸಭೆಗಳನ್ನು ಆಯೋಜಿಸಲಾಗುವುದು.
ಮದ್ಯಸೇವನೆಯು ವ್ಯಕ್ತಿಯ ದೈಹಿಕ ಮತ್ತು ಮಾನಸಿಕ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುವುದರ ಜೊತೆಗೆ ಕುಟುಂಬದ ನೆಮ್ಮದಿ, ಆರ್ಥಿಕ ಸ್ಥಿರತೆ ಹಾಗೂ ಸಾಮಾಜಿಕ ಜೀವನಕ್ಕೂ ಧಕ್ಕೆ ಉಂಟುಮಾಡುತ್ತದೆ.
ನಗರದ ಪಂಡಿತ ಸಿದ್ಧರಾಮ ಜಂಬಲದಿನ್ನಿ ರಂಗಮಂದಿರದಲ್ಲಿ ನವೆಂಬರ್ 14 ಮತ್ತು 15ರಂದು ನಡೆಯಲಿರುವ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಲಾಂಛನವನ್ನು ವಿಧಾನ ಪರಿಷತ್ ಸದಸ್ಯ ಹಾಗೂ ಸಮ್ಮೇಳನ ಸ್ವಾಗತ ಸಮಿತಿ ಅಧ್ಯಕ್ಷ ಎನ್.ಎಸ್.
ಕನ್ನಡ ನಾಡಿನ ಕಲೆ, ಸಾಹಿತ್ಯ ಹಾಗೂ ಸಂಸ್ಕೃತಿಯ ಬೆಳವಣಿಗೆಗೆ ದಶಕಗಳಿಂದ ಶ್ರಮಿಸುತ್ತಿರುವ ನೈಜ ಕಲಾವಿದರನ್ನು ಕಡೆಗಣಿಸಿ, ರಾಜಕೀಯ ಪ್ರಭಾವ ಮತ್ತು ಬೆಂಬಲ ಹೊಂದಿರುವವರಿಗೆ ರಾಜ್ಯೋತ್ಸವ ಪ್ರಶಸ್ತಿಗಳನ್ನು ನೀಡಲಾಗುತ್ತಿದೆ ಎಂದು ಬಯಲಾಟ ಕಲಾವಿದ ಅಕ್ಬರ್ ಹುಸೇನ್ ಆರೋಪಿಸಿದರು.
ಗೋರ ಸಮಾಜದ ಸಂಘಟನೆಯನ್ನು ತಾಂಡಾ ಮಟ್ಟದಿಂದ ಬಲಪಡಿಸುವುದು, ಸಮುದಾಯದ ಹಕ್ಕುಗಳಿಗಾಗಿ ಸಂಘಟಿತ ಹೋರಾಟ ರೂಪಿಸುವುದು ಹಾಗೂ ಯುವಜನರಲ್ಲಿ ಸಾಮಾಜಿಕ ಜಾಗೃತಿ ಮೂಡಿಸುವ ಉದ್ದೇಶದಿಂದ ರಾಷ್ಟ್ರೀಯ ಗೋರ ಸೇನೆ ವತಿಯಿಂದ ನವೆಂಬರ್ 6ರಂದು ದೇವದುರ್ಗ ನಗರದಲ್ಲಿ ತಾಲೂಕು ಮಟ್ಟದ ಯುವ ಗರ್ಜನಾ ಸಮಾವೇಶ ಆಯೋಜಿಸಲಾಗಿದೆ ಎಂದು ಸಂಘಟನೆಯ ರಾಯಚೂರು…
ಬರಗಾಲದಿಂದ ತತ್ತರಿಸಿರುವ ಗ್ರಾಮೀಣ ಪ್ರದೇಶಗಳ ಜನರಿಗೆ ಕುಡಿಯುವ ನೀರು ಒದಗಿಸುವಂತೆ ಮನವಿ ಸಲ್ಲಿಸಲು ತೆರಳಿದ್ದ ವೇಳೆ ಜಿಲ್ಲಾಧಿಕಾರಿಗಳು ತಮ್ಮೊಂದಿಗೆ ಅನುಚಿತವಾಗಿ ವರ್ತಿಸಿ, ಕಚೇರಿಯಿಂದ ಹೊರಹೋಗುವಂತೆ ಸೂಚಿಸಿದ್ದಾರೆ ಎಂದು ರೈತಪರ ಹೋರಾಟಗಾರ್ತಿ ಅನಿತಾ ನವಲಕಲ್ ಗಂಭೀರ ಆರೋಪ ಮಾಡಿದ್ದು, ಘಟನೆ ಕುರಿತು 48 ಗಂಟೆಗಳೊಳಗೆ ಸ್ಪಷ್ಟನೆ…
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಮೀಸಲಾತಿ ಹೆಚ್ಚಳಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ನೀಡಿರುವ ಆದೇಶದ ವಿರುದ್ಧ ರಾಜ್ಯ ಸರ್ಕಾರ ಕೂಡಲೇ ಸುಪ್ರೀಂ ಕೋರ್ಟ್ಗೆ ಮೇಲ್ಮನವಿ ಸಲ್ಲಿಸಬೇಕು ಹಾಗೂ ಮೀಸಲಾತಿ ಪ್ರಮಾಣವನ್ನು ಶೇ.17 ಮತ್ತು ಶೇ.7ರಂತೆ ಮುಂದುವರಿಸಲು ಅಗತ್ಯ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಮಾದಿಗ ಜಾತಿ ಉಪಜಾತಿ ಸಂಘಟನೆಗಳ…
ನಗರದ ಆಶಾಪೂರ ರಸ್ತೆಯಲ್ಲಿರುವ ಭಾರತೀಯ ಆಹಾರ ನಿಗಮದ (ಎಫ್ಸಿಐ) ಗೋದಾಮಿನ ಸುತ್ತಮುತ್ತಲಿನ ಬಡಾವಣೆಗಳಲ್ಲಿ ನುಸಿ ಹುಳಗಳ ಹಾವಳಿ ಹೆಚ್ಚಾಗಿದ್ದು, ಸ್ಥಳೀಯ ನಿವಾಸಿಗಳು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ.