ನಗರದ 71ನೇ ಕನ್ನಡ ರಾಜ್ಯೋತ್ಸವದ ಭವ್ಯ ಮೆರವಣಿಗೆಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವತಿಯಿಂದ ಕಿಶೋರಿ ಕೇಂದ್ರ ಸೇರಿದಂತೆ ವಿವಿಧ ರಾಷ್ಟ್ರೀಯ ಆರೋಗ್ಯ ಕಾರ್ಯಕ್ರಮಗಳ ಕುರಿತು ಜಾಗೃತಿ ಮೂಡಿಸುವ ಸ್ತಬ್ಧಚಿತ್ರ ಸಾರ್ವಜನಿಕರ ಗಮನ ಸೆಳೆಯಿತು.
ನಗರದ ಹೆಚ್ಸಿಎಂಎಸ್ಕೆ ಶಿಕ್ಷಣ ಮಹಾವಿದ್ಯಾಲಯದಲ್ಲಿ ಜಿಲ್ಲಾ ವೀರಶೈವ ಲಿಂಗಾಯತ ಸಮಾಜ ಹಾಗೂ ಮಹಾವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನೆ (ಎನ್ಎಸ್ಎಸ್) ಘಟಕದ ಸಂಯುಕ್ತಾಶ್ರಯದಲ್ಲಿ 71ನೇ ಕನ್ನಡ ರಾಜ್ಯೋತ್ಸವವನ್ನು ಭಾನುವಾರ ಸಂಭ್ರಮದಿಂದ ಆಚರಿಸಲಾಯಿತು.
ರಾಯಚೂರು: ಕರ್ನಾಟಕದ ಏಕೀಕರಣಕ್ಕಾಗಿ ಶ್ರಮಿಸಿದ ಮಹನೀಯರ ಕೊಡುಗೆ ಹಾಗೂ ನಾಡಿನ ಐತಿಹಾಸಿಕ ಗತವೈಭವದ ಕುರಿತು ಯುವಪೀಳಿಗೆಯಲ್ಲಿ ಜಾಗೃತಿ ಮೂಡಿಸುವುದು ಅಗತ್ಯವಾಗಿದೆ ಎಂದು ಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾಲಯದ ಕುಲಸಚಿವ ಡಾ. ಎ. ಚನ್ನಪ್ಪ ಕೆಎಎಸ್ ಹೇಳಿದರು.
ವಿದ್ಯಾರ್ಥಿಗಳಲ್ಲಿ ಕನ್ನಡ ಭಾಷೆ, ಸಾಹಿತ್ಯ, ಇತಿಹಾಸ ಹಾಗೂ ಸಂಸ್ಕೃತಿಯ ಬಗ್ಗೆ ಅರಿವು ಮತ್ತು ಅಭಿಮಾನ ಮೂಡಿಸಲು ರಸಪ್ರಶ್ನೆಯಂತಹ ಶೈಕ್ಷಣಿಕ ಕಾರ್ಯಕ್ರಮಗಳು ಸಹಕಾರಿಯಾಗಿವೆ ಎಂದು ಶಾಸಕ ಜಿ.
ಜಾಗತೀಕರಣ ಮತ್ತು ಆಧುನಿಕ ತಂತ್ರಜ್ಞಾನದ ಯುಗದಲ್ಲಿ ಇಂಗ್ಲಿಷ್ ಸೇರಿದಂತೆ ಇತರ ಭಾಷೆಗಳನ್ನು ಕಲಿಯುವುದು ಎಷ್ಟು ಅಗತ್ಯವೋ, ಅಷ್ಟೇ ಮಹತ್ವವನ್ನು ಮಾತೃಭಾಷೆ ಕನ್ನಡದ ಸಂರಕ್ಷಣೆ ಮತ್ತು ಬೆಳವಣಿಗೆಗೂ ನೀಡಬೇಕು ಎಂದು ಮಾನ್ವಿ ಶಾಸಕ ಜಿ.
ನಗರದ ಜಲಾಲನಗರದಲ್ಲಿ ಒಂದೇ ಕುಟುಂಬದ ನಾಲ್ವರು ಮೃತಪಟ್ಟ ಪ್ರಕರಣಕ್ಕೆ ಮಹತ್ವದ ತಿರುವು ದೊರೆತಿದ್ದು, ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಹತ್ಯೆಗೈದ ಬಳಿಕ ಪತಿ ವಿಷ್ಣು ರೈಲ್ವೆ ಹಳಿಯ ಮೇಲೆ ಮಲಗಿ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅರುಣಾಂಗ್ಶು ಗಿರಿ ಸ್ಪಷ್ಟಪಡಿಸಿದ್ದಾರೆ.
ಕನ್ನಡ ನಾಡು, ನುಡಿ ಹಾಗೂ ಸಂಸ್ಕೃತಿಯ ಬಗ್ಗೆ ವಿದ್ಯಾರ್ಥಿಗಳಲ್ಲಿ ಅಭಿಮಾನ ಮೂಡಿಸುವ ಉದ್ದೇಶದಿಂದ ಹಾಷ್ಮೀಯಾದ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ, ಸರ್ಕಾರಿ ಉರ್ದು ಹಿರಿಯ ಪ್ರಾಥಮಿಕ ಶಾಲೆ ಹಾಗೂ ಮೌಲಾನಾ ಅಬುಲ್ ಕಲಾಂ ಆಜಾದ್ ಆಂಗ್ಲ ಮಾಧ್ಯಮ ಶಾಲೆಗಳ ಸಂಯುಕ್ತಾಶ್ರಯದಲ್ಲಿ 71ನೇ ಕನ್ನಡ ರಾಜ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು.
ರಾಯಚೂರು: ಸ್ವಾತಂತ್ರ್ಯಾನಂತರ ದೇಶದ ವಿವಿಧ ಸಂಸ್ಥಾನಗಳನ್ನು ಭಾರತದ ಒಕ್ಕೂಟಕ್ಕೆ ಸೇರ್ಪಡೆಗೊಳಿಸುವ ಮೂಲಕ ರಾಷ್ಟ್ರದ ಏಕೀಕರಣ, ಐಕ್ಯತೆ ಮತ್ತು ಅಖಂಡತೆ ಸಾಧಿಸುವಲ್ಲಿ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರು ಅಪ್ರತಿಮ ಕೊಡುಗೆ ನೀಡಿದ್ದಾರೆ ಎಂದು ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ಪ್ರಾಂಶುಪಾಲೆ ಡಾ. ಸುಗುಣಾ ಬಸವರಾಜ್ ಹೇಳಿದರು.
ಸಹಕಾರಿ ಸಂಘಗಳು ಕೇವಲ ಹಣಕಾಸಿನ ವ್ಯವಹಾರಗಳಿಗೆ ಸೀಮಿತವಾಗದೆ ಜನರ ಆರ್ಥಿಕ ಪ್ರಗತಿ, ಸಾಮಾಜಿಕ ಏಳಿಗೆ ಹಾಗೂ ಪರಸ್ಪರ ವಿಶ್ವಾಸವನ್ನು ಬೆಳೆಸುವ ಕೇಂದ್ರಗಳಾಗಿ ಕಾರ್ಯನಿರ್ವಹಿಸಬೇಕು ಎಂದು ದೇವರಭೂಪುರ ಅಮರೇಶ್ವರ ಗುರು ಅಭಿನವ ಗಜದಂಡ ಶಿವಾಚಾರ್ಯರು ಹೇಳಿದರು.
ಲಿಂಗಸುಗೂರು: ವಿಜಯಪುರದ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯ ಹಾಗೂ ಲಿಂಗಸುಗೂರಿನ ಡಾ. ಸುಧಾಮೂರ್ತಿ ಇನೋ ಮಹಿಳಾ ಪದವಿ ಕಾಲೇಜಿನ ಸಂಯುಕ್ತಾಶ್ರಯದಲ್ಲಿ ನವೆಂಬರ್ 2 ಮತ್ತು 3ರಂದು ಅಂತರ್ ಮಹಿಳಾ ಮಹಾವಿದ್ಯಾಲಯಗಳ ಕಬಡ್ಡಿ ಮತ್ತು ಥ್ರೋಬಾಲ್ ಕ್ರೀಡಾಕೂಟ ಆಯೋಜಿಸಲಾಗಿದೆ ಎಂದು ಕಾಲೇಜಿನ ಪ್ರಾಚಾರ್ಯ ರಮೇಶ ವೆಂಕಟಾಪುರ ತಿಳಿಸಿದರು.
ಪಟ್ಟಣದ ವಾಕ್ಸಿದ್ಧಿ ಶಾಲೆಯಲ್ಲಿ ರಾಷ್ಟ್ರೀಯ ಏಕತಾ ದಿನಾಚರಣೆ ಅಂಗವಾಗಿ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರಿಗೆ ಗೌರವ ಸಲ್ಲಿಸುವುದರ ಜೊತೆಗೆ ವಿದ್ಯಾರ್ಥಿಗಳ ವೈಜ್ಞಾನಿಕ ಪ್ರತಿಭೆಯನ್ನು ಅನಾವರಣಗೊಳಿಸುವ ವಿಜ್ಞಾನ ವೈಭವ ವಸ್ತುಪ್ರದರ್ಶನವನ್ನು ಆಯೋಜಿಸಲಾಗಿತ್ತು.
ತಾಲೂಕಿನ ಉಮಲೂಟಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬುಕ್ಕನಹಟ್ಟಿ ಗ್ರಾಮದಲ್ಲಿ ಕಳೆದ ಒಂದೂವರೆ ವರ್ಷದಿಂದ ಎರಡು ವರ್ಷಗಳವರೆಗೆ ಸಮರ್ಪಕ ಕುಡಿಯುವ ನೀರು ಪೂರೈಕೆಯಾಗುತ್ತಿಲ್ಲ ಎಂದು ಆರೋಪಿಸಿ ಗ್ರಾಮಸ್ಥರು ಶನಿವಾರ ಕೊಡ, ಬಿಂದಿಗೆ ಹಿಡಿದು ಗ್ರಾಮ ಪಂಚಾಯಿತಿ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು.
ಮಾನ್ವಿ: ವೈದ್ಯಕೀಯ ಶಿಕ್ಷಣದ ಮೂಲಕ ಗಳಿಸಿದ ಜ್ಞಾನವನ್ನು ಸಮಾಜದ ಒಳಿತಿಗಾಗಿ ಬಳಸಿಕೊಳ್ಳಬೇಕು. ರೋಗಿಗಳ ಆರೋಗ್ಯ ಸುಧಾರಣೆಗೆ ನಿರಂತರವಾಗಿ ಶ್ರಮಿಸುವ ಮೂಲಕ ವೈದ್ಯಕೀಯ ವೃತ್ತಿಯ ಘನತೆ ಕಾಪಾಡಬೇಕು ಎಂದು ಎಸ್.ವಿ.ವಿ.ಕೆ. ಟ್ರಸ್ಟ್ ಅಧ್ಯಕ್ಷ ಹಾಗೂ ಕಲ್ಮಠದ ಶ್ರೀ ವಿರೂಪಾಕ್ಷ ಪಂಡಿತಾರಾಧ್ಯ ಶಿವಾಚಾರ್ಯ ಮಹಾಸ್ವಾಮಿಗಳು ಹೇಳಿದರು.
ಪಟ್ಟಣದ 5ನೇ ವಾರ್ಡ್ನ ಜನವಸತಿ ಪ್ರದೇಶದಲ್ಲಿರುವ ಶ್ರೀನಿಧಿ ಭಾರತ್ ಗ್ಯಾಸ್ ಸಂಸ್ಥೆಯ ಅಡುಗೆ ಅನಿಲ ಸಿಲಿಂಡರ್ಗಳ ಗೋದಾಮನ್ನು ಪಟ್ಟಣದ ಹೊರವಲಯದ ಸುರಕ್ಷಿತ ಪ್ರದೇಶಕ್ಕೆ ಸ್ಥಳಾಂತರಿಸಬೇಕು ಎಂದು ವಿಜಯ ಕರ್ನಾಟಕ ರಕ್ಷಣಾ ವೇದಿಕೆ ಒತ್ತಾಯಿಸಿದೆ.
ಮಕ್ಕಳ ಮೇಲಿನ ದೌರ್ಜನ್ಯ ಹಾಗೂ ಶೋಷಣೆಯಂತಹ ಪ್ರಕರಣಗಳು ಸಂಭವಿಸಿದ ನಂತರ ಕ್ರಮ ಕೈಗೊಳ್ಳುವುದಕ್ಕಿಂತ, ಅವುಗಳನ್ನು ಮುಂಚಿತವಾಗಿಯೇ ಗುರುತಿಸಿ ತಡೆಗಟ್ಟುವುದು ಅತ್ಯಂತ ಮುಖ್ಯವಾಗಿದೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ಕಂಚಿ ಮಾಯಣ್ಣ ಗೌತಮ್ ಹೇಳಿದರು.