ಪರಿಸರ ಸಂರಕ್ಷಣೆ ಹಾಗೂ ಹಸಿರೀಕರಣ ಕ್ಷೇತ್ರದಲ್ಲಿ ಸಲ್ಲಿಸುತ್ತಿರುವ ಸೇವೆಯನ್ನು ಗುರುತಿಸಿ ವನಸಿರಿ ಫೌಂಡೇಶನ್ ಅಧ್ಯಕ್ಷ, ಪರಿಸರ ಪ್ರೇಮಿ ಅಮರೇಗೌಡ ಮಲ್ಲಾಪುರ ಅವರಿಗೆ ತುರ್ವಿಹಾಳ ಪಟ್ಟಣದ ಶ್ರೀ ಸದ್ಗುರು ಸರ್ವೇಶ್ವರ ಮಠದ ವತಿಯಿಂದ 2026ನೇ ಸಾಲಿನ ಪ್ರತಿಷ್ಠಿತ ‘ಪರಮ ಶ್ರೀ’ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ನಗರದ ಮಂತ್ರಾಲಯ ರಸ್ತೆಯಲ್ಲಿರುವ ಶ್ರೀ ಸದ್ಗುರು ಸತ್ಯಾತ್ಮ ಶಿವಲಿಂಗೇಶ್ವರ ಮಠದಲ್ಲಿ ಶ್ರೀ ಬಸವೇಶ್ವರ ಸಾಂಸ್ಕೃತಿಕ ಅಭಿವೃದ್ಧಿ ಕಲಾ ಮಂಡಳಿ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ರಾಯಚೂರು ಇವರ ಸಂಯುಕ್ತಾಶ್ರಯದಲ್ಲಿ ಸುಗಮ ಸಂಗೀತ ಮತ್ತು ತತ್ವಪದ ಗಾಯನ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.
“ಯುವಶಕ್ತಿಯೇ ದೇಶದ ಶಕ್ತಿ” ಎಂಬ ಮಾತು ಭಾರತದ ಭವಿಷ್ಯವನ್ನು ರೂಪಿಸುವ ಯುವಜನತೆಯ ಮಹತ್ವವನ್ನು ಸಾರುತ್ತದೆ. ಯುವಜನರು ದೇಶದ ಅಭಿವೃದ್ಧಿಯ ಆಧಾರಸ್ತಂಭಗಳಾಗಿದ್ದಾರೆ. ಅವರಲ್ಲಿರುವ ಪ್ರತಿಭೆ, ಪರಿಶ್ರಮ, ಸೃಜನಶೀಲತೆ, ಆತ್ಮವಿಶ್ವಾಸ ಹಾಗೂ ಸಾಧನೆಯ ಹಂಬಲ ದೇಶವನ್ನು ಪ್ರಗತಿಯತ್ತ ಕೊಂಡೊಯ್ಯಬಲ್ಲವು.
ಕ್ಷಯರೋಗ ಮುಕ್ತ ಸಮಾಜ ನಿರ್ಮಾಣಕ್ಕೆ ಸಾರ್ವಜನಿಕರ ಸಹಕಾರ ಅತ್ಯಗತ್ಯವಾಗಿದ್ದು, ಆರೋಗ್ಯ ಇಲಾಖೆಯ ಸಿಬ್ಬಂದಿ ಮನೆಮನೆಗೆ ಭೇಟಿ ನೀಡಿ ನಡೆಸುವ ಸಕ್ರಿಯ ಕ್ಷಯರೋಗ ಪತ್ತೆ ಕಾರ್ಯಕ್ಕೆ ಪ್ರತಿಯೊಬ್ಬರೂ ಸಹಕರಿಸಬೇಕು.
ಪಟ್ಟಣದ ಮಹಾತ್ಮ ಗಾಂಧಿ ಕಾಲೋನಿಯಲ್ಲಿರುವ ಶ್ರೀ ಅಂಬಾ ಭವಾನಿ ದೇವಸ್ಥಾನದಲ್ಲಿ ದಸರಾ ಮಹೋತ್ಸವದ ಪೂಜಾ ಕಾರ್ಯಕ್ರಮಗಳು ಯಶಸ್ವಿಯಾಗಿ ಸಂಪನ್ನಗೊಂಡ ಹಿನ್ನೆಲೆಯಲ್ಲಿ ಸೋಮವಾರ ಹುಣ್ಣಿಮೆಯ ಅಂಗವಾಗಿ ವಿಶೇಷ ಪೂಜೆ, ಅಭಿಷೇಕ, ಅಲಂಕಾರ ಹಾಗೂ ಮಹಾಪ್ರಸಾದ ವಿತರಣೆ ಕಾರ್ಯಕ್ರಮವನ್ನು ಭಕ್ತಿಭಾವದಿಂದ ಹಮ್ಮಿಕೊಳ್ಳಲಾಗಿತ್ತು.
ಕಲ್ಯಾಣ ಕರ್ನಾಟಕ ಭಾಗದ ವಿಶಿಷ್ಟ ಸಾಂಸ್ಕೃತಿಕ ಪರಂಪರೆಯಾದ ತತ್ವಪದ ಸಾಹಿತ್ಯದ ಸಂರಕ್ಷಣೆ, ಸಂಶೋಧನೆ ಹಾಗೂ ಪ್ರಸಾರಕ್ಕೆ ಉತ್ತೇಜನ ನೀಡುವ ಉದ್ದೇಶದಿಂದ ರಾಯಚೂರಿನ ಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾಲಯದಲ್ಲಿ ಪ್ರತ್ಯೇಕ ‘ತತ್ವಪದ ಸಾಹಿತ್ಯ ಅಧ್ಯಯನ ಪೀಠ’ವನ್ನು ಸ್ಥಾಪಿಸಬೇಕು ಎಂದು ಕನ್ನಡ ಸಾಹಿತ್ಯ ಪರಿಷತ್ತಿನ…
ತಾಲೂಕಿನ ನಂದಿಹಾಳ ಹಳ್ಳದ ವ್ಯಾಪ್ತಿಯ ಗ್ರಾಮಗಳಲ್ಲಿ ಜನರು ಹಾಗೂ ಜಾನುವಾರುಗಳಿಗೆ ಕುಡಿಯುವ ನೀರಿನ ತೀವ್ರ ಅಭಾವ ಎದುರಾಗಿದ್ದು, ಗೋಲದಿನ್ನಿ ಎಸ್ಕೇಪ್ ಕಾಲುವೆ ಮೂಲಕ ಹಳ್ಳಕ್ಕೆ ಕೂಡಲೇ ನೀರು ಹರಿಸುವಂತೆ ಒತ್ತಾಯಿಸಿ ಗೋಲದಿನ್ನಿ ಎಸ್ಕೇಪ್ ರೈತ ಹೋರಾಟ ಸಮಿತಿಯ ಪದಾಧಿಕಾರಿಗಳು ತಹಸೀಲ್ದಾರ್ ಭೀಮರಾಯ ರಾಮಸಮುದ್ರ ಅವರಿಗೆ ಮನವಿ ಸಲ್ಲಿಸಿದರು.
ಪವಿತ್ರ ಕ್ಷೇತ್ರ ಅಯೋಧ್ಯೆಯಲ್ಲಿ ಭೂಮಿಪೂಜೆ ನೆರವೇರಿಸಿದ ಬಳಿಕ ಕಾಶಿ ಕ್ಷೇತ್ರಕ್ಕೆ ಭೇಟಿ ನೀಡಿದ ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದ ಪೀಠಾಧಿಪತಿ ಶ್ರೀ ಸುಬುಧೇಂದ್ರ ತೀರ್ಥ ಸ್ವಾಮೀಜಿ ಅವರು ವಾರಾಣಸಿಯಲ್ಲಿ ನೂತನ ಶ್ರೀಮಠ ನಿರ್ಮಾಣಕ್ಕೆ ಉದ್ದೇಶಿಸಿರುವ ವಿವಿಧ ಸ್ಥಳಗಳನ್ನು ಪರಿಶೀಲಿಸಿದರು.
ನಗರದ ಆಶಾಪುರ ರಸ್ತೆಯ ಸುತ್ತಮುತ್ತಲಿನ ಬಡಾವಣೆಗಳಲ್ಲಿ ರಾತ್ರಿ ವೇಳೆ ಅನುಮಾನಾಸ್ಪದ ವ್ಯಕ್ತಿಗಳ ಓಡಾಟ ಹಾಗೂ ಕಳ್ಳತನದ ಯತ್ನಗಳು ಹೆಚ್ಚಾಗುತ್ತಿರುವ ಆರೋಪ ಕೇಳಿಬಂದಿದ್ದು, ನಿವಾಸಿಗಳಲ್ಲಿ ಆತಂಕ ಮನೆಮಾಡಿದೆ.
ರೈತರ ಆರ್ಥಿಕ ಸಬಲೀಕರಣ ಹಾಗೂ ಗ್ರಾಮೀಣ ಕೃಷಿ ಅಭಿವೃದ್ಧಿಯಲ್ಲಿ ಪ್ರಮುಖ ಪಾತ್ರ ವಹಿಸುತ್ತಾ ಬಂದಿರುವ ಜಾಲಹಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘವು ಸ್ಥಾಪನೆಯಾಗಿ 50 ವರ್ಷಗಳನ್ನು ಪೂರೈಸಿದ್ದು, ಸುವರ್ಣ ಮಹೋತ್ಸವದ ಸಂಭ್ರಮಕ್ಕೆ ಸಾಕ್ಷಿಯಾಗಿದೆ.
ನಗರ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಹೆಚ್ಚುತ್ತಿರುವ ಅಕ್ರಮ ಮದ್ಯ ಮತ್ತು ಗಾಂಜಾ ಮಾರಾಟವನ್ನು ನಿಯಂತ್ರಿಸಿ, ಇಂತಹ ಚಟುವಟಿಕೆಗಳಲ್ಲಿ ತೊಡಗಿರುವವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಬಿಜೆಪಿ ಮುಖಂಡರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.
ಕಳೆದ 10 ತಿಂಗಳಿಂದ ಬಾಕಿ ಉಳಿದಿರುವ ವೇತನವನ್ನು ಕೂಡಲೇ ಬಿಡುಗಡೆ ಮಾಡುವಂತೆ ಆಗ್ರಹಿಸಿ ತುಂಗಭದ್ರಾ ನೀರಾವರಿ ಕಾರ್ಮಿಕರ ಸಂಘದ ನೇತೃತ್ವದಲ್ಲಿ ಕಾರ್ಮಿಕರು ಪಟ್ಟಣದ ನೀರಾವರಿ ಇಲಾಖೆಯ ಸಹಾಯಕ ಕಾರ್ಯಪಾಲಕ ಅಭಿಯಂತರರ ಕಚೇರಿ ಆವರಣದಲ್ಲಿ ಪ್ರತಿಭಟನೆ ನಡೆಸಿದರು.
ಮಸ್ಕಿ ವಿಧಾನಸಭಾ ಕ್ಷೇತ್ರದ ತಿಡಿಗೋಳ ಮತ್ತು ನಿಡಿಗೋಳ ಗ್ರಾಮಗಳಲ್ಲಿ ದಲಿತ ಸಮುದಾಯದ ಜನರು ಎದುರಿಸುತ್ತಿರುವ ಸಮಸ್ಯೆಗಳನ್ನು ಪರಿಹರಿಸುವಂತೆ ಒತ್ತಾಯಿಸಿ ನವೆಂಬರ್ 8ರಂದು ‘ತಿಡಿಗೋಳ ಚಲೋ’ ಹೆಸರಿನಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲು ನಿರ್ಧರಿಸಲಾಗಿದೆ ಎಂದು ದಲಿತ ಮುಖಂಡ ಹಾಗೂ ಉಪನ್ಯಾಸಕ ತಾಯಪ್ಪ ತಿಡಿಗೋಳ್ ತಿಳಿಸಿದರು.
ಜಿಲ್ಲೆಯ ಗ್ರಾಮೀಣ ಹಾಗೂ ನಗರ ಪ್ರದೇಶಗಳ ಯುವ ಕ್ರೀಡಾಪಟುಗಳನ್ನು ಪ್ರೋತ್ಸಾಹಿಸುವ ಜೊತೆಗೆ ಪ್ರತಿಭಾವಂತರನ್ನು ರಾಜ್ಯಮಟ್ಟದ ಸ್ಪರ್ಧೆಗಳಿಗೆ ಸಜ್ಜುಗೊಳಿಸುವ ಉದ್ದೇಶದಿಂದ ಅಕ್ಟೋಬರ್ 29ರಂದು ನಗರದ ಮಹಾತ್ಮ ಗಾಂಧಿ ಕ್ರೀಡಾಂಗಣದಲ್ಲಿ ನಿಡ್ಜಾಮ್-2026 (NIDJAM) ಅಥ್ಲೆಟಿಕ್ಸ್ ಕ್ರೀಡಾಕೂಟ ಹಮ್ಮಿಕೊಳ್ಳಲಾಗಿದೆ ಎಂದು ರಾಯಚೂರು ಅಥ್ಲೆಟಿಕ್ಸ್…
ನಗರದ ಎಲ್‌ಬಿಎಸ್ ನಗರದಲ್ಲಿ ಹಾಡಹಗಲೇ ಜನನಿಬಿಡ ಪ್ರದೇಶದಲ್ಲಿ ಅಮಾಯಕ ವ್ಯಾಪಾರಸ್ಥನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆಯನ್ನು ತೀವ್ರವಾಗಿ ಖಂಡಿಸಿರುವ ವಿವಿಧ ಕನ್ನಡಪರ ಸಂಘಟನೆಗಳ ಮುಖಂಡರು, ನಗರದಲ್ಲಿ ಕಾನೂನು ಸುವ್ಯವಸ್ಥೆ ಬಲಪಡಿಸಿ ಸಾರ್ವಜನಿಕರಿಗೆ ಸೂಕ್ತ ರಕ್ಷಣೆ ಒದಗಿಸುವಂತೆ ಜಿಲ್ಲಾಡಳಿತವನ್ನು ಆಗ್ರಹಿಸಿದ್ದಾರೆ.