ನಗರದ ಕಿಲ್ಲೇ ಬೃಹನ್ಮಠದಲ್ಲಿ ಪೀಠಾಧಿಪತಿ ಪೂಜ್ಯ ಶ್ರೀ ಶಾಂತಮಲ್ಲ ಶಿವಾಚಾರ್ಯ ಸ್ವಾಮೀಜಿಗಳ ನೇತೃತ್ವದಲ್ಲಿ ನಡೆಯುತ್ತಿರುವ 88ನೇ ವರ್ಷದ ಶ್ರೀದೇವಿ ಮಹಾಪುರಾಣ ಪ್ರವಚನದ ಆರನೇ ದಿನದ ಕಾರ್ಯಕ್ರಮವು ಶುಕ್ರವಾರ ಭಕ್ತಿಭಾವದಿಂದ ಜರುಗಿತು.
ರಾಯಚೂರು ಅ. 16 (ಕರ್ನಾಟಕ ವಾರ್ತೆ): ಅಡುಗೆ ಸಿಬ್ಬಂದಿಗಳು ವೈಯಕ್ತಿಕ ಸ್ವಚ್ಛತೆಗೆ ಆದ್ಯತೆ ನೀಡುವ ಮೂಲಕ ನಿಗದಿತ ಸಮಯದಲ್ಲಿ ಪೌಷ್ಟಿಕ ಆಹಾರ ತಯಾರಿಸಿ, ಮಕ್ಕಳಿಗೆ ನೀಡಬೇಕೆಂದು ರಾಯಚೂರು ಸಹಾಯಕ ಆಯುಕ್ತರಾದ ಡಾ. ಹಂಪಣ್ಣ ಸಜ್ಜನ್ ಅವರು ಹೇಳಿದರು. ಅಕ್ಟೋಬರ್ 16ರ ಶುಕ್ರವಾರದಂದು ರಾಯಚೂರು ನಗರದ ಡಾ. ಬಿ.ಆರ್.
ಪಟ್ಟಣದ ಪುರಸಭೆ ವ್ಯಾಪ್ತಿಯ ಸ್ವಾಮಿ ವಿವೇಕಾನಂದ ನಗರದಲ್ಲಿರುವ ಜಿಲ್ಲಾ ಪಂಚಾಯಿತಿ ಕಚೇರಿ ಮುಂಭಾಗದಲ್ಲಿ ಸಂಗ್ರಹವಾಗಿದ್ದ ಕಸದ ರಾಶಿ ಹಾಗೂ ಚರಂಡಿಯ ತ್ಯಾಜ್ಯವನ್ನು ತೆರವುಗೊಳಿಸಿ, ಸ್ವಚ್ಛ ಸಂಕಲ್ಪ ಮಾಸ–2026ರ ಅಭಿಯಾನದ ಅಂಗವಾಗಿ ಸ್ವಚ್ಛತಾ ಕಾರ್ಯ ಕೈಗೊಳ್ಳಲಾಯಿತು.
ಲಿಂಗಸುಗೂರು ತಾಲೂಕು ಪೊಲೀಸ್ ಇಲಾಖೆಯ ನೂತನ ಡಿವೈಎಸ್ಪಿಯಾಗಿ ಅಧಿಕಾರ ವಹಿಸಿಕೊಂಡಿರುವ ಸುಲೇಮಾನ್ ತಹಸೀಲ್ದಾರ್ ಅವರನ್ನು ತಾಲೂಕು ಟಿಪ್ಪು ಸುಲ್ತಾನ್ ಸಂಘದ ವತಿಯಿಂದ ಆತ್ಮೀಯವಾಗಿ ಸನ್ಮಾನಿಸಿ ಗೌರವಿಸಲಾಯಿತು.
ಪಟ್ಟಣದ ರಾಯಚೂರು ರಸ್ತೆಯ ಭಗೀರಥ ಕಾಲೋನಿಯ ಶ್ರೀ ಲಕ್ಷ್ಮೀವೆಂಕಟೇಶ್ವರ ದೇವಸ್ಥಾನದಲ್ಲಿ ದಸರಾ ನವರಾತ್ರಿ ಮಹೋತ್ಸವದ ಅಂಗವಾಗಿ ವಿಶೇಷ ಪೂಜೆ, ಅಭಿಷೇಕ ಹಾಗೂ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಭಕ್ತಿಭಾವದಿಂದ ಜರುಗಿದವು.
ರಾಯಚೂರು–ಕೊಪ್ಪಳ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕಿನ (ಆರ್‌ಡಿಸಿಸಿ) ನಿರ್ದೇಶಕರ ಚುನಾವಣೆಯಲ್ಲಿ ಭಾಗವಹಿಸಲು ದೇವದುರ್ಗ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಪ್ರತಿನಿಧಿಯಾಗಿ ಸಂಘದ ಉಪಾಧ್ಯಕ್ಷೆ ಹನುಮಂತಿ ದೊಡ್ಡ ಹನುಮಂತ್ರಾಯ ಸೋಮಕಾರ ಅವರನ್ನು…
ಶಕ್ತಿನಗರ: ಕೆಲಸದ ಒತ್ತಡ ಪ್ರತಿಯೊಬ್ಬರ ವೃತ್ತಿಜೀವನದಲ್ಲಿಯೂ ಸಹಜವಾಗಿ ಎದುರಾಗುತ್ತದೆ. ಆದರೆ ಅದನ್ನು ಸಕಾರಾತ್ಮಕವಾಗಿ ಸ್ವೀಕರಿಸಿ, ಸೂಕ್ತ ರೀತಿಯಲ್ಲಿ ನಿರ್ವಹಿಸುವ ಮೂಲಕ ಮಾನಸಿಕ ಆರೋಗ್ಯವನ್ನು ಕಾಪಾಡಿಕೊಳ್ಳಬೇಕು ಎಂದು ಡಾ. ಮನೋಹರ್ ವೈ. ಪತ್ತಾರ ಸಲಹೆ ನೀಡಿದರು.
ರಾಯಚೂರು ಜಿಲ್ಲಾ ಪಂಚಾಯತ್ ಕ್ಷೇತ್ರಗಳ ಮೀಸಲಾತಿಗೆ ಸಂಬಂಧಿಸಿದಂತೆ ಪ್ರಕಟಿಸಿರುವ ಕರಡು ಅಧಿಸೂಚನೆಯಲ್ಲಿ ಬಿಸಿಎಂ-ಬಿ (ಪ್ರವರ್ಗ-ಬಿ) ವರ್ಗಕ್ಕೆ ಒಂದೂ ಕ್ಷೇತ್ರವನ್ನು ಮೀಸಲಿಡದಿರುವುದು ಅನ್ಯಾಯವಾಗಿದ್ದು, ಸಂಬಂಧಪಟ್ಟ ಅಧಿಕಾರಿಗಳು ತಕ್ಷಣ ಕರಡು…
ತಾಲೂಕಿನ ಗಬ್ಬೂರು ಬಸ್ ನಿಲ್ದಾಣದಲ್ಲಿರುವ ಸಾರ್ವಜನಿಕ ಶೌಚಾಲಯ ನಿರ್ವಹಣೆ ಇಲ್ಲದೆ ದುಸ್ಥಿತಿಗೆ ತಲುಪಿದ್ದು, ಮಹಿಳಾ ಮತ್ತು ಪುರುಷರ ಶೌಚಾಲಯಗಳಿಗೆ ಬೀಗ ಹಾಕಿರುವುದರಿಂದ ಪ್ರಯಾಣಿಕರು ಹಾಗೂ ಸಾರ್ವಜನಿಕರು ತೀವ್ರ ತೊಂದರೆ ಅನುಭವಿಸುವಂತಾಗಿದೆ.
ಬೆಂಗಳೂರಿನಲ್ಲಿ ನವೆಂಬರ್ 22ರಿಂದ 26ರವರೆಗೆ ನಡೆಯಲಿರುವ ಆಲ್ ಇಂಡಿಯಾ ಟ್ರೇಡ್ ಯೂನಿಯನ್ ಕಾಂಗ್ರೆಸ್ (ಎಐಟಿಯುಸಿ) ಸಂಘಟನೆಯ 43ನೇ ರಾಷ್ಟ್ರೀಯ ಸಮ್ಮೇಳನದ ಹಿನ್ನೆಲೆಯಲ್ಲಿ ಹಟ್ಟಿ ಘಟಕದ ವತಿಯಿಂದ ಪೂರ್ವಭಾವಿ ಸಭೆ ನಡೆಸಿ, ಸಮ್ಮೇಳನದ ಯಶಸ್ಸಿಗೆ ಸ್ವಯಂಪ್ರೇರಿತ ದೇಣಿಗೆ ಸಂಗ್ರಹಿಸಲಾಯಿತು.
ಈಶಾನ್ಯ ಕರ್ನಾಟಕ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಚುನಾವಣೆಯ ಹಿನ್ನೆಲೆಯಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಶರಣಪ್ಪ ಮಟ್ಟೂರ ಅವರ ಪರವಾಗಿ ಲಿಂಗಸುಗೂರು ಪಟ್ಟಣದ ವಿವಿಧ ಶಿಕ್ಷಣ ಸಂಸ್ಥೆಗಳಲ್ಲಿ ಮತಯಾಚನೆ ನಡೆಸಲಾಯಿತು.
ಈಶಾನ್ಯ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಚುನಾವಣೆಯ ಹಿನ್ನೆಲೆಯಲ್ಲಿ ವಿಧಾನ ಪರಿಷತ್ ಸದಸ್ಯ ಹಾಗೂ ಕೆಪಿಸಿಸಿ ಕಾರ್ಯಾಧ್ಯಕ್ಷ ಎ. ವಸಂತಕುಮಾರ ಅವರು ಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾಲಯಕ್ಕೆ ಭೇಟಿ ನೀಡಿ, ಉಪನ್ಯಾಸಕರೊಂದಿಗೆ ಸಮಾಲೋಚನೆ ನಡೆಸಿದರು.
ರಾಯಚೂರು ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದಲ್ಲಿ 2023ನೇ ಸಾಲಿನಲ್ಲಿ ಸಹಾಯಕ ಪ್ರಾಧ್ಯಾಪಕರು ಸೇರಿದಂತೆ ವಿವಿಧ ಹುದ್ದೆಗಳಿಗೆ ನಡೆದ ನೇಮಕಾತಿ ಪ್ರಕ್ರಿಯೆಯಲ್ಲಿ ವ್ಯಾಪಕ ಭ್ರಷ್ಟಾಚಾರ ಹಾಗೂ ನಿಯಮಗಳ ಉಲ್ಲಂಘನೆ ನಡೆದಿದೆ ಎಂದು ಆರೋಪಿಸಿರುವ ಜಿಲ್ಲಾ ಜನತಾದಳ…
ನಗರದ ಬೃಹಸ್ಪತಿವಾರಪೇಟೆಯ ಶ್ರೀ ವೀರಭದ್ರೇಶ್ವರ ದೇವಸ್ಥಾನದ ಆವರಣದಲ್ಲಿ ಬೆಳೆದಿರುವ ಓಂಕಾರ ರೂಪದ ಬನ್ನಿ ಮಂಟಪವು ಭಕ್ತರ ಗಮನ ಸೆಳೆಯುತ್ತಿದ್ದು, ಇದರ ದರ್ಶನಕ್ಕಾಗಿ ಪ್ರತಿನಿತ್ಯ ನೂರಾರು ಮಹಿಳೆಯರು ಹಾಗೂ ಪುರುಷರು ದೇವಸ್ಥಾನಕ್ಕೆ ಆಗಮಿಸುತ್ತಿದ್ದಾರೆ.
ನಗರದ ಬೃಹಸ್ಪತಿವಾರಪೇಟೆಯ ಉಪ್ಪಾರವಾಡಿಯ ಶ್ರೀ ಲಕ್ಷ್ಮೀವೆಂಕಟೇಶ್ವರ ದೇವಸ್ಥಾನದಲ್ಲಿ 55ನೇ ನವರಾತ್ರಿ ಮಹೋತ್ಸವದ ಅಂಗವಾಗಿ ಗುರುವಾರ ಕಾಮಧೇನು ಕಲ್ಪವೃಕ್ಷ ವಾಹನೋತ್ಸವವು ಭಕ್ತಿ, ಶ್ರದ್ಧೆ ಹಾಗೂ ಸಡಗರದಿಂದ ಜರುಗಿತು.
ಅಡುಗೆ ಕೋಣೆ ಮತ್ತು ಆಹಾರದ ಸ್ವಚ್ಛತೆಯನ್ನು ಕಾಪಾಡುವ ಮೂಲಕ ಬೆಳೆಯುವ ಮಕ್ಕಳಿಗೆ ಸಮತೋಲಿತ ಮತ್ತು ರುಚಿಕರವಾದ ಒಳ್ಳೆಯ ಆಹಾರ ನೀಡಬೇಕೆಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಈಶ್ವರ ಕುಮಾರ್ ಕಾಂದೂ ಅವರು ಹೇಳಿದರು.
ಯುವಜನರ ವ್ಯಕ್ತಿತ್ವ ವಿಕಸನದಲ್ಲಿ ಕ್ರೀಡೆ ಮತ್ತು ಶಿಕ್ಷಣ ಪ್ರಮುಖ ಪಾತ್ರ ವಹಿಸುತ್ತವೆ. ಕ್ರೀಡಾ ಚಟುವಟಿಕೆಗಳು ಯುವಕರಲ್ಲಿ ಶಿಸ್ತು, ಸೌಹಾರ್ದತೆ ಹಾಗೂ ಒಗ್ಗಟ್ಟಿನ ಮನೋಭಾವ ಬೆಳೆಸುತ್ತವೆ.
ಮನುಷ್ಯನ ಹುಟ್ಟು ಮತ್ತು ಸಾವಿನ ನಡುವಿನ ಜೀವನವನ್ನು ಅರ್ಥಪೂರ್ಣವಾಗಿಸಿಕೊಳ್ಳಲು ಧಾರ್ಮಿಕ ಚಿಂತನೆ, ಆಧ್ಯಾತ್ಮಿಕ ಜ್ಞಾನ ಹಾಗೂ ಮಾನವೀಯ ಮೌಲ್ಯಗಳನ್ನು ಅಳವಡಿಸಿಕೊಳ್ಳುವುದು ಅಗತ್ಯವಾಗಿದೆ.