ರಾಯಚೂರು, ಸೆ.30: ನಗರದ ತಾಯಿ ಮತ್ತು ಮಕ್ಕಳ ಆಸ್ಪತ್ರೆಗೆ ತಾಲೂಕು ಆರೋಗ್ಯ ಅಧಿಕಾರಿಗಳು ಭೇಟಿ ನೀಡಿ, ಗರ್ಭಿಣಿಯರು ಹಾಗೂ ಮಕ್ಕಳಿಗೆ ನೀಡಲಾಗುತ್ತಿರುವ ಆರೋಗ್ಯ ಸೇವೆಗಳನ್ನು ಪರಿಶೀಲಿಸಿ, ಸುಗಮ ಹಾಗೂ ಗುಣಮಟ್ಟದ ಸೇವೆ ಒದಗಿಸುವಂತೆ ಸಂಬಂಧಪಟ್ಟ ಸಿಬ್ಬಂದಿಗೆ ಸೂಚಿಸಿದರು.
ರಾಯಚೂರು, ಸೆ.30: ವೈಜಾಗ್‌ನಲ್ಲಿ ಅಕ್ಟೋಬರ್ 8ರಿಂದ 16ರವರೆಗೆ ನಡೆಯಲಿರುವ ಬಿಸಿಸಿಐ ವಿನು ಮಂಕಡ್ ಟ್ರೋಫಿ 2026–27 ಕ್ರಿಕೆಟ್ ಪಂದ್ಯಾವಳಿಗೆ ಕರ್ನಾಟಕ ರಾಜ್ಯ ತಂಡವನ್ನು ಪ್ರಕಟಿಸಲಾಗಿದ್ದು, ರಾಯಚೂರು ಜಿಲ್ಲೆಯ ಯುವ ಕ್ರಿಕೆಟ್ ಪ್ರತಿಭೆ **ಅನಿಕೇತ್ ರೆಡ್ಡಿ** ತಂಡದಲ್ಲಿ ಸ್ಥಾನ ಪಡೆಯುವ ಮೂಲಕ ಜಿಲ್ಲೆಗೆ ಹೆಮ್ಮೆ ತಂದಿದ್ದಾರೆ.
ಜಾಲಹಳ್ಳಿ, ಸೆ.30: ನಾರಾಯಣಪುರ ಬಲದಂಡೆ ಕಾಲುವೆಯಲ್ಲಿ ಜಾರಿಗೊಳಿಸಿರುವ ಅವೈಜ್ಞಾನಿಕ ವಾರಬಂದಿ ಪದ್ಧತಿಯನ್ನು ಸರಿಪಡಿಸಿ, ಕಾಲುವೆಯ ಕೊನೆ ಭಾಗದ ರೈತರಿಗೂ ಸಮರ್ಪಕವಾಗಿ ನೀರು ತಲುಪಿಸಬೇಕು ಹಾಗೂ ಪಂಪ್‌ಸೆಟ್‌ಗಳಿಗೆ ಪ್ರತಿದಿನ 7 ಗಂಟೆ ನಿರಂತರ ವಿದ್ಯುತ್ ಪೂರೈಸಬೇಕು ಎಂದು ಆಗ್ರಹಿಸಿ ರೈತರು ಬೃಹತ್ ಪ್ರತಿಭಟನೆ ನಡೆಸಿದರು.
ಲಿಂಗಸಗೂರು: ತಾಲೂಕಿನ ಪೈದೊಡ್ಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸುಮಾರು ಏಳು ಗ್ರಾಮಗಳಿಗೆ ಸಮರ್ಪಕವಾಗಿ ವಿದ್ಯುತ್ ಪೂರೈಕೆಯಾಗದ ಕಾರಣ ವಿದ್ಯಾರ್ಥಿಗಳು, ರೈತರು, ಮಹಿಳೆಯರು ಹಾಗೂ ಗ್ರಾಮಸ್ಥರು ತೀವ್ರ ತೊಂದರೆ ಅನುಭವಿಸುತ್ತಿದ್ದು, ಕೂಡಲೇ ಸಮಸ್ಯೆ ಪರಿಹರಿಸಿ ಹಿಂದಿನಂತೆ ನಿರಂತರ ವಿದ್ಯುತ್ ಪೂರೈಸಬೇಕು ಎಂದು ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ…
ಸಿಂಧನೂರು, ಸೆ.30: ಹಸಿದವರಿಗೆ ಅನ್ನ ನೀಡುವ ಮಾನವೀಯ ಧ್ಯೇಯದೊಂದಿಗೆ ಅಕ್ಷರ ಆಹಾರ ಜೋಳಿಗೆ ಟ್ರಸ್ಟ್ ವತಿಯಿಂದ ನಗರದಲ್ಲಿ ನಿರಂತರವಾಗಿ ನಡೆಸಿಕೊಂಡು ಬರುತ್ತಿರುವ ಅನ್ನದಾಸೋಹ ಸೇವೆ ಬುಧವಾರ 139ನೇ ದಿನಕ್ಕೆ ಕಾಲಿಟ್ಟಿತು.
ರಾಯಚೂರು, ಸೆ.30: ರೇಬೀಸ್ ಮಾರಣಾಂತಿಕ ಕಾಯಿಲೆಯಾಗಿದ್ದು, ಸಾಕು ನಾಯಿ ಅಥವಾ ಬೀದಿ ನಾಯಿ ಕಚ್ಚಿದರೆ, ದೇಹದ ಮೇಲಿನ ಗಾಯವನ್ನು ನೆಕ್ಕಿದರೆ ಅಥವಾ ಉಗುರಿನಿಂದ ಪರಚಿದರೆ ನಿರ್ಲಕ್ಷ್ಯ ಮಾಡದೆ ತಕ್ಷಣ ಗಾಯವನ್ನು ನೀರಿನಿಂದ ಚೆನ್ನಾಗಿ ತೊಳೆದು, ಯಾವುದೇ ಪದಾರ್ಥ ಹಚ್ಚದೆ ಹತ್ತಿರದ ಸರ್ಕಾರಿ ಆಸ್ಪತ್ರೆಗೆ ತೆರಳಿ ವೈದ್ಯರ ಸಲಹೆಯಂತೆ ಚಿಕಿತ್ಸೆ…
ಮಾನ್ವಿ: ಹಿರಿಯ ಕಾಂಗ್ರೆಸ್ ನಾಯಕ ಹಾಗೂ ಸಚಿವ ಸತೀಶ್ ಜಾರಕಿಹೊಳಿ ಅವರನ್ನು ರಾಜಕೀಯವಾಗಿ ಹತ್ತಿಕ್ಕುವ ಉದ್ದೇಶದಿಂದ ಜಾರಿ ನಿರ್ದೇಶನಾಲಯದ (ಇಡಿ) ಮೂಲಕ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ನಾಯ್ಡು ನಾಯಕ ಆರೋಪಿಸಿದರು.
ಮಾನ್ವಿ: ಪಟ್ಟಣ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಪರವಾನಗಿ ಇಲ್ಲದೆ ಕಾರ್ಯನಿರ್ವಹಿಸುತ್ತಿರುವ ಹೋಟೆಲ್‌ಗಳು ಮತ್ತು ಬೀದಿ ಬದಿ ಆಹಾರ ಮಳಿಗೆಗಳನ್ನು ಪರಿಶೀಲಿಸಿ, ಕಳಪೆ ಗುಣಮಟ್ಟದ ಆಹಾರ ಪೂರೈಸುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ಕನ್ನಡ ಸೇನೆ ಕರ್ನಾಟಕ ತಾಲೂಕು ಘಟಕದ ವತಿಯಿಂದ ಗ್ರೇಡ್-2 ತಹಶೀಲ್ದಾರ್…
ದೇವದುರ್ಗ: ಪ್ರೊ. ಬಿ. ಕೃಷ್ಣಪ್ಪ ಅವರು ಸ್ಥಾಪಿಸಿದ ಕರ್ನಾಟಕ ದಲಿತ ಸಂಘರ್ಷ ಸಮಿತಿ (ರಿ.) ಮೂಲ ಸಂಘಟನೆಯ ದೇವದುರ್ಗ ತಾಲೂಕು ಘಟಕವನ್ನು ಮತ್ತಷ್ಟು ಬಲಪಡಿಸುವ ಉದ್ದೇಶದಿಂದ ನೂತನ ತಾಲೂಕು ಪದಾಧಿಕಾರಿಗಳನ್ನು ಅವಿರೋಧವಾಗಿ ಆಯ್ಕೆ ಮಾಡಲಾಗಿದೆ.
ಸಿಂಧನೂರು, ಸೆ.30: ಜೀವನದಲ್ಲಿ ಎದುರಾಗುವ ಒತ್ತಡ, ನಿರಾಶೆ ಹಾಗೂ ಸಂಕಷ್ಟಗಳನ್ನು ಧೈರ್ಯದಿಂದ ಎದುರಿಸುವ ಮನೋಸ್ಥೈರ್ಯವನ್ನು ಯುವಜನರು ಬೆಳೆಸಿಕೊಳ್ಳಬೇಕು. ಆತ್ಮಹತ್ಯೆ ತಡೆಗಟ್ಟುವಲ್ಲಿ ಯುವಕರ ಪಾತ್ರ ಅತ್ಯಂತ ಮಹತ್ವದ್ದಾಗಿದೆ ಎಂದು ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮದ ಮನೋಶಾಸ್ತ್ರಜ್ಞ ಅರುಣ್ ಕುಮಾರ್ ಕುಲಕರ್ಣಿ ಹೇಳಿದರು.
ಲಿಂಗಸುಗೂರುಸೆ. 30: ರಾಯಚೂರು ಜಿಲ್ಲೆಯ ಲಿಂಗಸುಗೂರು ಜೆಸ್ಕಾಂ ಕರ‍್ಯ ಮತ್ತು ಪಾಲನೆ ವಿಭಾಗದ ವ್ಯಾಪ್ತಿಯ ಲಿಂಗಸುಗೂರು ನಗರದ ಹೊಸ ಲಿಂಕ್ ಲೈನ್ ಕಾಮಗಾರಿ ಹಮ್ಮಿಕೊಂಡ ಪ್ರಯುಕ್ತ ಅಕ್ಟೋಬರ್ 01 ಹಾಗೂ 02ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದ್ದು, ಸರ‍್ವಜನಿಕರು ಸಹಕರಿಸುವಂತೆ ಕೋರಲಾಗಿದೆ.
ರಾಯಚೂರು ಸೆ.: ರಾಯಚೂರು ಜಿಲ್ಲೆಯ ದೇವದರ‍್ಗ ಆರಕ್ಷಕ ವೃತ್ತ ನಿರೀಕ್ಷಕರ ಕಚೇರಿ ವ್ಯಾಪ್ತಿಯ ಮದರಕಲ್ ಗ್ರಾಮದ ತಿಪ್ಪಮ್ಮ ಗಂಡ ಗೋಪಾಲ (35) ಎಂಬ ಮಹಿಳೆಯು 2024ರ ಸೆಪ್ಟಂಬರ್ 13ರ ಮಧ್ಯಾಹ್ನ 12ಗಂಟೆಯ ಸುಮಾರಿಗೆ ಹೊಲಕ್ಕೆ ನಂತರ ಬರುವುದಾಗಿ ಹೇಳಿ ಕಾಣೆಯಾಗಿದ್ದು, ಈ ಕುರಿತು ಗಬ್ಬೂರು ಠಾಣಾ ಗುನ್ನೆ ನಂ-126/2024 ಕಲಂ…
ರಾಯಚೂರು ಸೆಪ್ಟಂಬರ್ 30 (ರ‍್ನಾಟಕ ವರ‍್ತೆ): ಸಮಾಜ ಕಲ್ಯಾಣ ಇಲಾಖೆಯಿಂದ 2026-27ನೇ ಸಾಲಿನಲ್ಲಿ ವಿದ್ಯರ‍್ಥಿ ವೇತನ, ಪ್ರೋತ್ಸಾಹ ಧನ ಮತ್ತು ವಿದ್ಯರ‍್ಥಿ ನಿಲಯಗಳ ಪ್ರವೇಶಾತಿ ಕರ‍್ಯಕ್ರಮದಡಿ ವಿದ್ಯರ‍್ಥಿ ವೇತನ ಮತ್ತು ಪ್ರೋತ್ಸಾಹ ಧನ ಅಭಿಯಾನ ಕರ‍್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.
ರಾಯಚೂರು ಸೆಪ್ಟಂಬರ್ 30: ರ‍್ನಾಟಕ ವಿಧಾನ ಪರಿಷತ್ತಿನ ಈಶಾನ್ಯ ಶಿಕ್ಷಕರ ಕ್ಷೇತ್ರಗಳ ದ್ವೆöÊವರ‍್ಷಿಕ ಚುನಾವಣೆಗೆ ನಿಯೋಜಿತ ವಿವಿಧ ತಂಡಗಳಾದ ಪ್ಲೈಯಿಂಗ್ ಸ್ಕಾö್ಯಡ, ಸ್ಥಿರ ಕಣ್ಗಾವಲು ತಂಡ, ವಿಡಿಯೋ ವೀಕ್ಷಣ ತಂಡ ಮತ್ತು ಸೆಕ್ಟರ್ ವಲಯ ಅಧಿಕಾರಿಗಳ ತಂಡ ಸೇರಿದಂತೆ ಇತರೆ ವಿವಿಧ ತಂಡಗಳು ಜವಾಬ್ದಾರಿಯಿಂದ ರ‍್ತವ್ಯ ನರ‍್ವಹಿಸುವ…
ರಾಯಚೂರು: ಸೆ.30: ಜಿಲ್ಲಾ ಪಂಚಾಯತ್ ಮಾನ್ಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಈಶ್ವರ್ ಕಾಂದೂ, ಭಾ.ಆ.ಸೇ. ರವರು ಮಾನ್ವಿ ತಾಲ್ಲೂಕಿನ ವಿವಿಧ ಗ್ರಾಮ ಪಂಚಾಯಿತಿಗಳಿಗೆ ಭೇಟಿ ನೀಡಿ, ವಿವಿಧ ಅಭಿವೃದ್ಧಿ ಕಾಮಗಾರಿಗಳು ಹಾಗೂ ಸರ್ಕಾರಿ ಸಂಸ್ಥೆಗಳ ಕಾರ್ಯಚಟುವಟಿಕೆಗಳನ್ನು ಪರಿಶೀಲಿಸಿದರು.
ರಾಯಚೂರು: “ರಕ್ತದಾನ — ಜೀವದಾನ, ಮಾನವೀಯತೆಯ ಮಹಾದಾನ” ಎಂಬ ಸಂದೇಶದೊಂದಿಗೆ ಸಂಸ್ಕೃತಿ ಸೇವಾ ಟ್ರಸ್ಟ್ (ರಿ), ರಾಯಚೂರು ಹಾಗೂ ಭಾರತೀಯ ವೈದ್ಯಕೀಯ ಸಂಘ (ಐಎಂಎ) ರಾಯಚೂರು ಇವರ ಸಂಯುಕ್ತ ಆಶ್ರಯದಲ್ಲಿ ರಕ್ತದಾನ ಶಿಬಿರವನ್ನು ಯಶಸ್ವಿಯಾಗಿ ಆಯೋಜಿಸಲಾಯಿತು.
ಸಿಂಧನೂರು: ಆರ್ಥಿಕವಾಗಿ ಹಿಂದುಳಿದ ಪ್ರತಿಭಾವಂತ ವಿದ್ಯಾರ್ಥಿಗಳ ಉನ್ನತ ಶಿಕ್ಷಣಕ್ಕೆ ನೆರವಾಗುವ ಉದ್ದೇಶದಿಂದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ನೀಡಲಾಗುತ್ತಿರುವ ‘ಸುಜ್ಞಾನ ನಿಧಿ’ ವಿದ್ಯಾರ್ಥಿವೇತನವು ಗ್ರಾಮೀಣ ಭಾಗದ ವಿದ್ಯಾರ್ಥಿಗಳ ಶೈಕ್ಷಣಿಕ ಕನಸು ನನಸಾಗಿಸಲು ನೆರವಾಗುತ್ತಿದೆ ಎಂದು ಗಣ್ಯರು ಅಭಿಪ್ರಾಯಪಟ್ಟರು.
ರಾಯಚೂರು, ಸೆ.30: ರಾಜ್ಯದಲ್ಲಿ ಬರ ಪರಿಸ್ಥಿತಿಯಿಂದ ರೈತರು ಸಂಕಷ್ಟ ಎದುರಿಸುತ್ತಿದ್ದರೂ ಸರ್ಕಾರ ಸಮರ್ಪಕವಾಗಿ ಸ್ಪಂದಿಸುತ್ತಿಲ್ಲ ಎಂದು ಆರೋಪಿಸಿ ಜಾತ್ಯಾತೀತ ಜನತಾದಳ (ಜೆಡಿಎಸ್) ಕಾರ್ಯಕರ್ತರು ಬುಧವಾರ ನಗರದ ಡಾ.ಬಿ.ಆರ್. ಅಂಬೇಡ್ಕರ್ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು.
ಸಿಂಧನೂರು, ಸೆ.30: ಕರ್ತವ್ಯ ನಿರ್ವಹಣೆಯಲ್ಲಿ ನಿರ್ಲಕ್ಷ್ಯ, ಮೇಲಾಧಿಕಾರಿಗಳ ಆದೇಶ ಪಾಲಿಸದಿರುವುದು, ಕೇಂದ್ರಸ್ಥಾನದಲ್ಲಿ ಹಾಜರಿರದೆ ಸಾರ್ವಜನಿಕ ಕುಡಿಯುವ ನೀರಿನ ಸಮಸ್ಯೆಗಳಿಗೆ ಸಮರ್ಪಕವಾಗಿ ಸ್ಪಂದಿಸದಿರುವುದು ಸೇರಿದಂತೆ ಹಲವು ಆರೋಪಗಳ ಹಿನ್ನೆಲೆಯಲ್ಲಿ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಉಪವಿಭಾಗ, ಸಿಂಧನೂರು ಕಚೇರಿಯ ಕಿರಿಯ…
ರಾಯಚೂರು: ಜಿಲ್ಲಾ ಮಡಿವಾಳ ಮಾಚಿದೇವ ಸಮಾಜದ ಹಾಲಿ ಕಾರ್ಯಕಾರಿ ಸಮಿತಿಯ ಅಧಿಕಾರಾವಧಿ ಇನ್ನೂ ಮುಕ್ತಾಯವಾಗದಿದ್ದರೂ ಹೊಸ ಅಧ್ಯಕ್ಷರು ಹಾಗೂ ಗೌರವಾಧ್ಯಕ್ಷರನ್ನು ನೇಮಕ ಮಾಡಿರುವ ಕ್ರಮ ನಿಯಮಬಾಹಿರವಾಗಿದೆ ಎಂದು ಸಮಾಜದ ಜಿಲ್ಲಾಧ್ಯಕ್ಷ ಜಂಬಣ್ಣ ಯಕ್ಲಾಸಪೂರು ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ಸಿರವಾರ, ಸೆ.29: ಸಾರ್ವಜನಿಕ ಗಣೇಶೋತ್ಸವಗಳು ಧಾರ್ಮಿಕ ಆಚರಣೆಗೆ ಮಾತ್ರ ಸೀಮಿತವಾಗದೆ, ಹಿಂದೂ ಸಮಾಜವನ್ನು ಸಂಘಟಿಸುವ ಹಾಗೂ ಪರಸ್ಪರ ಒಗ್ಗಟ್ಟು ಬೆಳೆಸುವ ವೇದಿಕೆಗಳಾಗಿವೆ. ಹಿಂದೂಗಳು ಸಂಘಟಿತರಾಗಿದ್ದರೆ ಅವರ ಏಕತೆಯನ್ನು ಯಾರಿಂದಲೂ ಮುರಿಯಲು ಸಾಧ್ಯವಿಲ್ಲ ಎಂದು ವಿಜಯಪುರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೇಳಿದರು.