ರಾಯಚೂರು: ನಗರದ 7ನೇ ಹಾಗೂ 9ನೇ ದಿನದ ಗಣೇಶ ವಿಸರ್ಜನೆ ಮೆರವಣಿಗೆ ಸಂದರ್ಭದಲ್ಲಿ ಸಂಭವಿಸಬಹುದಾದ ಅವಘಡಗಳಿಂದ ಸಾವು-ನೋವು ತಪ್ಪಿಸಲು ಪ್ರಮುಖ ವೃತ್ತಗಳಲ್ಲಿ ತಾತ್ಕಾಲಿಕ ತುರ್ತು ಚಿಕಿತ್ಸಾ ಕೇಂದ್ರಗಳನ್ನು ತೆರೆಯಬೇಕು ಹಾಗೂ ಆಂಬುಲೆನ್ಸ್ ವ್ಯವಸ್ಥೆ ಮಾಡಬೇಕು ಎಂದು ಲೋಕ ಜನಶಕ್ತಿ ಪಕ್ಷದ ಜಿಲ್ಲಾಧ್ಯಕ್ಷ ಬಂಗಿ ಮುನಿರೆಡ್ಡಿ ಜಿಲ್ಲಾಡಳಿತ…
ರಾಯಚೂರು, ಸೆ.20: ಭಾರತ ಸರ್ಕಾರದ ಯುವ ವ್ಯವಹಾರಗಳು ಮತ್ತು ಕ್ರೀಡಾ ಸಚಿವಾಲಯದ ಅಧೀನದಲ್ಲಿರುವ ಮೈ ಭಾರತ್ (MY Bharat), ರಾಯಚೂರು ವತಿಯಿಂದ ನಗರದ ಭಾರತೀಯ ಮಾಹಿತಿ ತಂತ್ರಜ್ಞಾನ ಸಂಸ್ಥೆ (ಐಐಐಟಿ)ಯಲ್ಲಿ “ನಶಾ ಮುಕ್ತ ಯುವ ಫಾರ್ ವಿಕಸಿತ್ ಭಾರತ್” ಸಂಕಲ್ಪ ಅಭಿಯಾನದ ಉದ್ಘಾಟನಾ ಕಾರ್ಯಕ್ರಮ ನಡೆಯಿತು.
ರಾಯಚೂರು: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ರಾಯಚೂರಿನಲ್ಲಿ ಆಯೋಜಿಸಲು ಉದ್ದೇಶಿಸಿರುವ 41ನೇ ರಾಜ್ಯ ಮಟ್ಟದ ಪತ್ರಕರ್ತರ ಸಮ್ಮೇಳನದ ಪೂರ್ವಸಿದ್ಧತೆಗಳ ಕುರಿತು ರಾಯಚೂರು ಗ್ರಾಮೀಣ ಕ್ಷೇತ್ರದ ಶಾಸಕ ದದ್ದಲ್ ಬಸನಗೌಡ ಅವರೊಂದಿಗೆ ಸಂಘದ ಪದಾಧಿಕಾರಿಗಳು ಹಾಗೂ ಪತ್ರಕರ್ತರು ಸಮಾಲೋಚನೆ ನಡೆಸಿದರು.
ಸಿಂಧನೂರು: ಹಾನಗಲ್ಲ ಶ್ರೀ ಕುಮಾರ ಮಹಾಶಿವಯೋಗಿಗಳ 159ನೇ ಜಯಂತಿ ಮಹೋತ್ಸವ ಸಮಾರಂಭ-2026ನ್ನು ಸೆ.23ರಿಂದ ಅ.4ರವರೆಗೆ ಸಿಂಧನೂರು ನಗರದಲ್ಲಿ ವಿವಿಧ ಧಾರ್ಮಿಕ, ಆಧ್ಯಾತ್ಮಿಕ ಹಾಗೂ ಸಾಮಾಜಿಕ ಕಾರ್ಯಕ್ರಮಗಳೊಂದಿಗೆ ಆಚರಿಸಲು ಸಿದ್ಧತೆ ಮಾಡಿಕೊಳ್ಳಲಾಗಿದೆ.
ರಾಯಚೂರು, ಸೆ.20: ಮಾನ್ವಿ–ರಾಯಚೂರು ಸಂಪರ್ಕಿಸುವ ರಾಜ್ಯ ಹೆದ್ದಾರಿ-23ರ ಕಲೂರು ಸಮೀಪ ಭಾನುವಾರ ಬೆಳಗ್ಗೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಮಾನ್ವಿ: ವಿದ್ಯಾರ್ಥಿಗಳು ಶಾಲಾ ಹಂತದಲ್ಲಿಯೇ ಜೀವನದ ಉನ್ನತ ಗುರಿಗಳನ್ನು ರೂಪಿಸಿಕೊಂಡು, ಯುಪಿಎಸ್‌ಸಿ ಹಾಗೂ ಕೆಪಿಎಸ್‌ಸಿ ಸೇರಿದಂತೆ ಸ್ಪರ್ಧಾತ್ಮಕ ಪರೀಕ್ಷೆಗಳತ್ತ ಗಮನಹರಿಸಿ ವಿಶೇಷ ಅಧ್ಯಯನದಲ್ಲಿ ತೊಡಗಬೇಕು ಎಂದು ಡಾ. ವಸಂತ್ ಕುಮಾರ್ ಹೇಳಿದರು.
ರಾಯಚೂರು: ತಾಲೂಕಿನ ದಿನ್ನಿ ಗ್ರಾಮದ ಸರ್ಕಾರಿ ಪ್ರೌಢಶಾಲೆಯ 10ನೇ ತರಗತಿ ವಿದ್ಯಾರ್ಥಿಗಳ ಫಲಿತಾಂಶ ಸುಧಾರಣೆಗೆ ನೆರವಾಗುವ ಉದ್ದೇಶದಿಂದ ಗ್ರಾಮದ ದಾನಿ ದುಳ್ಳಯ್ಯ (ಕುಕನೂರು) ಅವರು ಸುಮಾರು ₹25 ಸಾವಿರಕ್ಕೂ ಅಧಿಕ ಮೌಲ್ಯದ ಕಲಿಕಾ ಸಾಮಗ್ರಿಗಳನ್ನು ಶಾಲೆಗೆ ದೇಣಿಗೆಯಾಗಿ ನೀಡಿದ್ದಾರೆ.
ರಾಯಚೂರು, ಸೆ.19: ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ರಾಯಚೂರು ವತಿಯಿಂದ ನಾಡೋಜ ಡಾ. ಬರಗೂರು ರಾಮಚಂದ್ರಪ್ಪ ದತ್ತಿಯಡಿ ನೀಡಲಾಗುವ ದಿ. ಶ್ರೀಮತಿ ರಾಜಲಕ್ಷ್ಮಿ ರಾಮಚಂದ್ರಪ್ಪ ದತ್ತಿ ಪ್ರಶಸ್ತಿ ಪ್ರದಾನ ಸಮಾರಂಭವು ಸೆ.20ರಂದು ಭಾನುವಾರ ಬೆಳಗ್ಗೆ 10.30ಕ್ಕೆ ನಗರದ ಕನ್ನಡ ಭವನದಲ್ಲಿ ನಡೆಯಲಿದೆ.
ಕವಿತಾಳ್: ರಾಜ್ಯದ ಶೈಕ್ಷಣಿಕ ಕ್ಷೇತ್ರದ ಅಭಿವೃದ್ಧಿಯಲ್ಲಿ ಖಾಸಗಿ ಶಿಕ್ಷಣ ಸಂಸ್ಥೆಗಳ ಕೊಡುಗೆ ಮಹತ್ವದ್ದಾಗಿದೆ ಎಂದು ವಿಧಾನ ಪರಿಷತ್ ಸದಸ್ಯ ಎನ್.ಎಸ್. ಬೋಸರಾಜು ಹೇಳಿದರು. ಅವರು ಪ್ರಸ್ತುತ ಕರ್ನಾಟಕ ವಿಧಾನ ಪರಿಷತ್ ಸದಸ್ಯರಾಗಿದ್ದಾರೆ.
ಲಿಂಗಸುಗೂರು: ಲಿಂಗಸುಗೂರು ಹಾಗೂ ಮಸ್ಕಿ ತಾಲೂಕುಗಳನ್ನು ಬರಪೀಡಿತ ಪ್ರದೇಶಗಳೆಂದು ಘೋಷಿಸಿರುವ ಹಿನ್ನೆಲೆಯಲ್ಲಿ ರೈತರಿಗೆ ತ್ವರಿತವಾಗಿ ಬೆಳೆ ಪರಿಹಾರ ನೀಡಬೇಕು, ಕೃಷಿ ಸಾಲ ಮನ್ನಾ ಮಾಡಬೇಕು ಹಾಗೂ ಎಪಿಎಂಸಿಯಲ್ಲಿ ನಡೆಯುತ್ತಿದೆ ಎನ್ನಲಾದ ಅವ್ಯವಹಾರಗಳ ಕುರಿತು ತನಿಖೆ ನಡೆಸಬೇಕು ಎಂದು ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ತಾಲೂಕು ಅಧ್ಯಕ್ಷ…
ರಾಯಚೂರು, ಸೆ.19: ಕರ್ನಾಟಕ ಸರ್ಕಾರ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಕರ್ನಾಟಕ ಕ್ರೀಡಾ ಪ್ರಾಧಿಕಾರ ಹಾಗೂ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಸಹಯೋಗದಲ್ಲಿ ಆಯೋಜಿಸಿದ್ದ 2026–27ನೇ ಸಾಲಿನ ರಾಯಚೂರು ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟದ ಯೋಗ ಸ್ಪರ್ಧೆಯಲ್ಲಿ ಬಸವಶ್ರೀ…
ಕವಿತಾಳ: ಕಲ್ಯಾಣ ಕರ್ನಾಟಕ ವಿಮೋಚನಾ ದಿನ ಹಾಗೂ ವಿಶ್ವಕರ್ಮ ಜಯಂತಿ ಅಂಗವಾಗಿ ಪಟ್ಟಣದ ಕೆಎನ್‌ಎನ್‌ಎಲ್ ನಂ.2 ಕಾಲುವೆ ಉಪವಿಭಾಗದ ಸಹಾಯಕ ಕಾರ್ಯಪಾಲಕ ಅಭಿಯಂತರರ ಕಚೇರಿಯಲ್ಲಿ ನಿಗದಿತ ಸಮಯಕ್ಕೆ ಕಾರ್ಯಕ್ರಮ ಹಾಗೂ ರಾಷ್ಟ್ರಧ್ವಜಾರೋಹಣ ನಡೆಯಲಿಲ್ಲ ಎಂದು ಸ್ಥಳೀಯ ಸಂಘಟನೆಗಳು ಆರೋಪಿಸಿವೆ.
ಕಲಬುರಗಿ: ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರದ ಮಟ್ಟದಲ್ಲಿ ಕ್ರಮ ಕೈಗೊಂಡು ಸಿಬ್ಬಂದಿ ನೇಮಕಾತಿಗೆ ಮುಂದಾಗಬೇಕು ಹಾಗೂ ಶಕ್ತಿ ಯೋಜನೆಯಡಿ ಸರ್ಕಾರದಿಂದ ನಿಗಮಕ್ಕೆ ಬರಬೇಕಿರುವ ಹಣವನ್ನು ಶೀಘ್ರ ಬಿಡುಗಡೆಗೊಳಿಸಬೇಕು ಎಂದು ಅಖಿಲ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ…
ರಾಯಚೂರು, ಸೆ.19: ನಗರದ ಎಂ. ಈರಣ್ಣ ವೃತ್ತದ ಬಳಿ ಗಣೇಶ ಮೂರ್ತಿ ವಿಸರ್ಜನೆ ಮೆರವಣಿಗೆಯ ವೇಳೆ ಟ್ರ್ಯಾಕ್ಟರ್ ನಿಯಂತ್ರಣ ತಪ್ಪಿ ಸಂಭವಿಸಿದ ಅಪಘಾತದಲ್ಲಿ ಇಬ್ಬರು ಬಾಲಕರು ಮೃತಪಟ್ಟಿದ್ದು, ಮತ್ತೊಬ್ಬ ಬಾಲಕ ಗಂಭೀರವಾಗಿ ಗಾಯಗೊಂಡ ಘಟನೆ ಶನಿವಾರ ನಡೆದಿದೆ.
ಸಿಂಧನೂರು: ತಾಲೂಕಿನ ಆರ್‌ಎಚ್ ಕ್ಯಾಂಪ್–5ರ ಹೊರವಲಯದ ಜಮೀನಿನಲ್ಲಿ ಮಹಿಳೆಯೊಬ್ಬರ ಮೇಲೆ ಕಲ್ಲಿನಿಂದ ಹಲ್ಲೆ ನಡೆಸಿದ ಘಟನೆ ಶನಿವಾರ ಬೆಳಕಿಗೆ ಬಂದಿದ್ದು, ಗಂಭೀರವಾಗಿ ಗಾಯಗೊಂಡಿದ್ದ ಮಹಿಳೆ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ.
ಲಿಂಗಸುಗೂರು: ಜಿಲ್ಲೆಯ ಲಿಂಗಸುಗೂರು ಪಟ್ಣಣದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ರಾಯಚೂರು ಹಾಗೂ ತಾಲೂಕು ಆಡಳಿತ ಲಿಂಗಸುಗೂರು ಇವರ ವತಿಯಿಂದ ನಡೆದ ಪ್ರಜಾಸೇವಾ ಆಂದೋಲನ ಸಭೆಯಲ್ಲಿ ಸಾರ್ವಜನಿಕರಿಂದ ಒಟ್ಟಾರೆಯಾಗಿ 89 ಅಹವಾಲುಗಳು ಸಲ್ಲಿಕೆಯಾಗಿವೆ ಎಂದು ಲಿಂಗಸುಗೂರು ತಹಶೀಲ್ದಾರ್ ಸತ್ಯಮ್ಮ ಅವರು…
ಲಿಂಗಸುಗೂರು: ಮಾನ್ಯ ಮುಖ್ಯಮಂತ್ರಿಗಳ ಸೂಚನೆಯಂತೆ ಜನರ ಮನೆ 'ಬಾಗಿಲಿಗೆ ಆಡಳಿತ' ತಲುಪಿಸುವ ನಿಟ್ಟಿನಲ್ಲಿ ಪ್ರತಿಯೊಂದು ಸಾರ್ವಜನಿಕರ ಮನವಿಯನ್ನು ಕೂಲಂಕುಷವಾಗಿ ಪರಿಶೀಲಿಸಿ, ಇಲಾಖೆಗಳ ನಡುವೆ ಸಮನ್ವಯ ಸಾಧಿಸಿ ತ್ವರಿತವಾಗಿ ಅರ್ಜಿಗಳ ವಿಲೇವಾರಿ ಮಾಡಲಾಗುವುದು ಮತ್ತು ಪರಿಹಾರದ ಮಾಹಿತಿಯನ್ನು ಅರ್ಜಿದಾರರಿಗೆ ನೀಡಲಾಗುವುದು ಎಂದು…
ಹಟ್ಟಿ ಚಿನ್ನದ ಗಣಿ: ಸಮೀಪದ ಹಿರೇನಗನೂರು ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಪ್ರತಿ ವರ್ಷದಂತೆ ಈ ವರ್ಷವೂ ಕನ್ನಡ ಮಾಧ್ಯಮದ ಒಂದನೇ ತರಗತಿಗೆ ಹೊಸದಾಗಿ ದಾಖಲಾದ 22 ಮಕ್ಕಳಿಗೆ ಉಚಿತವಾಗಿ ಬ್ಯಾಗ್, ನೋಟ್‌ಬುಕ್ ಹಾಗೂ ಪೆನ್ಸಿಲ್ ಒಳಗೊಂಡ ಕಲಿಕಾ ಕಿಟ್‌ಗಳನ್ನು ಶಿಕ್ಷಣ ಪ್ರೇಮಿ ಹಾಗೂ ಸಮಾಜ ಸೇವಕ ಮೌನುದ್ದೀನ್ ಬೂದಿನಾಳ…
ಹಟ್ಟಿ ಚಿನ್ನದ ಗಣಿ: ನೈಸ್ ಯೋಜನೆಗಾಗಿ ಭೂಮಿ ಕಳೆದುಕೊಂಡ ರೈತರ ಹೋರಾಟಕ್ಕೆ ಬೆಂಬಲ ವ್ಯಕ್ತಪಡಿಸಿ, ರೈತ ಹಾಗೂ ಕಾರ್ಮಿಕ ಸಂಘಟನೆಗಳ ಮುಖಂಡರನ್ನು ಪೊಲೀಸರು ವಶಕ್ಕೆ ಪಡೆದಿರುವುದನ್ನು ಖಂಡಿಸಿ ವಿವಿಧ ಸಂಘಟನೆಗಳ ನೇತೃತ್ವದಲ್ಲಿ ಶನಿವಾರ ಹಟ್ಟಿಯಲ್ಲಿ ಪ್ರತಿಭಟನೆ ನಡೆಸಲಾಯಿತು.
ಜಾಲಹಳ್ಳಿ: ದೇವದುರ್ಗ ತಾಲೂಕಿನ ಬಸವ ಪ್ರೌಢಶಾಲೆಯಲ್ಲಿ ವಿಜ್ಞಾನ ಸಹ ಶಿಕ್ಷಕರಾಗಿ ಸೇವೆ ಸಲ್ಲಿಸುತ್ತಿರುವ ದೇವರಾಜ ಭೈರಪ್ಪ ಅವರಿಗೆ ಶೈಕ್ಷಣಿಕ ಕ್ಷೇತ್ರದಲ್ಲಿ ಸಲ್ಲಿಸಿರುವ ಸೇವೆಯನ್ನು ಗುರುತಿಸಿ ಉತ್ತಮ ಶಿಕ್ಷಕ ಪ್ರಶಸ್ತಿ ಪ್ರದಾನ ಮಾಡಲಾಯಿತು.
ರಾಯಚೂರು: ದೇವದುರ್ಗ ತಾಲೂಕಿನ ಹದ್ದಿನಾಳ ಗ್ರಾಮದ ಭೂಮಾನಂದ ಅವರ ಕೊಲೆ ಪ್ರಕರಣವನ್ನು ಸಿಐಡಿ ತನಿಖೆಗೆ ವಹಿಸಬೇಕು ಎಂದು ರಾಯಚೂರು ದಲಿತಪರ ಸಂಘಟನೆಗಳ ಒಕ್ಕೂಟದ ಹಿರಿಯ ಮುಖಂಡ ರವೀಂದ್ರನಾಥ್ ಪಟ್ಟಿ ಆಗ್ರಹಿಸಿದರು.
ರಾಯಚೂರು, ಸೆ.18: ಕಳೆದ ನಾಲ್ಕು ವರ್ಷ ಎಂಟು ತಿಂಗಳ ಕಾಲ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ನಡೆಸದೆ, ಅಧಿಕಾರಾವಧಿ ಮುಗಿಯುವ ಹಂತದಲ್ಲಿ ಸಮ್ಮೇಳನ ಆಯೋಜಿಸಲು ಮುಂದಾಗಿರುವುದರ ಉದ್ದೇಶವೇನು ಎಂದು ಅಣ್ಣಪ್ಪ ಮೇಟಿಗೌಡ ಪ್ರಶ್ನಿಸಿದರು.