ರಾಯಚೂರು: ಸ್ವಾತಂತ್ರ್ಯಾನಂತರ ದೇಶದ ವಿವಿಧ ಸಂಸ್ಥಾನಗಳನ್ನು ಭಾರತದ ಒಕ್ಕೂಟಕ್ಕೆ ಸೇರ್ಪಡೆಗೊಳಿಸುವ ಮೂಲಕ ರಾಷ್ಟ್ರದ ಏಕೀಕರಣ, ಐಕ್ಯತೆ ಮತ್ತು ಅಖಂಡತೆ ಸಾಧಿಸುವಲ್ಲಿ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರು ಅಪ್ರತಿಮ ಕೊಡುಗೆ ನೀಡಿದ್ದಾರೆ ಎಂದು ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ಪ್ರಾಂಶುಪಾಲೆ ಡಾ. ಸುಗುಣಾ ಬಸವರಾಜ್ ಹೇಳಿದರು.
ಸಹಕಾರಿ ಸಂಘಗಳು ಕೇವಲ ಹಣಕಾಸಿನ ವ್ಯವಹಾರಗಳಿಗೆ ಸೀಮಿತವಾಗದೆ ಜನರ ಆರ್ಥಿಕ ಪ್ರಗತಿ, ಸಾಮಾಜಿಕ ಏಳಿಗೆ ಹಾಗೂ ಪರಸ್ಪರ ವಿಶ್ವಾಸವನ್ನು ಬೆಳೆಸುವ ಕೇಂದ್ರಗಳಾಗಿ ಕಾರ್ಯನಿರ್ವಹಿಸಬೇಕು ಎಂದು ದೇವರಭೂಪುರ ಅಮರೇಶ್ವರ ಗುರು ಅಭಿನವ ಗಜದಂಡ ಶಿವಾಚಾರ್ಯರು ಹೇಳಿದರು.
ಲಿಂಗಸುಗೂರು: ವಿಜಯಪುರದ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯ ಹಾಗೂ ಲಿಂಗಸುಗೂರಿನ ಡಾ. ಸುಧಾಮೂರ್ತಿ ಇನೋ ಮಹಿಳಾ ಪದವಿ ಕಾಲೇಜಿನ ಸಂಯುಕ್ತಾಶ್ರಯದಲ್ಲಿ ನವೆಂಬರ್ 2 ಮತ್ತು 3ರಂದು ಅಂತರ್ ಮಹಿಳಾ ಮಹಾವಿದ್ಯಾಲಯಗಳ ಕಬಡ್ಡಿ ಮತ್ತು ಥ್ರೋಬಾಲ್ ಕ್ರೀಡಾಕೂಟ ಆಯೋಜಿಸಲಾಗಿದೆ ಎಂದು ಕಾಲೇಜಿನ ಪ್ರಾಚಾರ್ಯ ರಮೇಶ ವೆಂಕಟಾಪುರ ತಿಳಿಸಿದರು.
ಪಟ್ಟಣದ ವಾಕ್ಸಿದ್ಧಿ ಶಾಲೆಯಲ್ಲಿ ರಾಷ್ಟ್ರೀಯ ಏಕತಾ ದಿನಾಚರಣೆ ಅಂಗವಾಗಿ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರಿಗೆ ಗೌರವ ಸಲ್ಲಿಸುವುದರ ಜೊತೆಗೆ ವಿದ್ಯಾರ್ಥಿಗಳ ವೈಜ್ಞಾನಿಕ ಪ್ರತಿಭೆಯನ್ನು ಅನಾವರಣಗೊಳಿಸುವ ವಿಜ್ಞಾನ ವೈಭವ ವಸ್ತುಪ್ರದರ್ಶನವನ್ನು ಆಯೋಜಿಸಲಾಗಿತ್ತು.
ತಾಲೂಕಿನ ಉಮಲೂಟಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬುಕ್ಕನಹಟ್ಟಿ ಗ್ರಾಮದಲ್ಲಿ ಕಳೆದ ಒಂದೂವರೆ ವರ್ಷದಿಂದ ಎರಡು ವರ್ಷಗಳವರೆಗೆ ಸಮರ್ಪಕ ಕುಡಿಯುವ ನೀರು ಪೂರೈಕೆಯಾಗುತ್ತಿಲ್ಲ ಎಂದು ಆರೋಪಿಸಿ ಗ್ರಾಮಸ್ಥರು ಶನಿವಾರ ಕೊಡ, ಬಿಂದಿಗೆ ಹಿಡಿದು ಗ್ರಾಮ ಪಂಚಾಯಿತಿ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು.
ಮಾನ್ವಿ: ವೈದ್ಯಕೀಯ ಶಿಕ್ಷಣದ ಮೂಲಕ ಗಳಿಸಿದ ಜ್ಞಾನವನ್ನು ಸಮಾಜದ ಒಳಿತಿಗಾಗಿ ಬಳಸಿಕೊಳ್ಳಬೇಕು. ರೋಗಿಗಳ ಆರೋಗ್ಯ ಸುಧಾರಣೆಗೆ ನಿರಂತರವಾಗಿ ಶ್ರಮಿಸುವ ಮೂಲಕ ವೈದ್ಯಕೀಯ ವೃತ್ತಿಯ ಘನತೆ ಕಾಪಾಡಬೇಕು ಎಂದು ಎಸ್.ವಿ.ವಿ.ಕೆ. ಟ್ರಸ್ಟ್ ಅಧ್ಯಕ್ಷ ಹಾಗೂ ಕಲ್ಮಠದ ಶ್ರೀ ವಿರೂಪಾಕ್ಷ ಪಂಡಿತಾರಾಧ್ಯ ಶಿವಾಚಾರ್ಯ ಮಹಾಸ್ವಾಮಿಗಳು ಹೇಳಿದರು.
ಪಟ್ಟಣದ 5ನೇ ವಾರ್ಡ್‌ನ ಜನವಸತಿ ಪ್ರದೇಶದಲ್ಲಿರುವ ಶ್ರೀನಿಧಿ ಭಾರತ್ ಗ್ಯಾಸ್ ಸಂಸ್ಥೆಯ ಅಡುಗೆ ಅನಿಲ ಸಿಲಿಂಡರ್‌ಗಳ ಗೋದಾಮನ್ನು ಪಟ್ಟಣದ ಹೊರವಲಯದ ಸುರಕ್ಷಿತ ಪ್ರದೇಶಕ್ಕೆ ಸ್ಥಳಾಂತರಿಸಬೇಕು ಎಂದು ವಿಜಯ ಕರ್ನಾಟಕ ರಕ್ಷಣಾ ವೇದಿಕೆ ಒತ್ತಾಯಿಸಿದೆ.
ಬೆಂಗಳೂರು, ಅ.31: ಕರ್ನಾಟಕ ರಾಜ್ಯ ರೆಡ್ಡಿ ಜನಸಂಘದ ರಾಜ್ಯ ಸಂಘಟನಾ ಸಮಿತಿಯ ಕಾರ್ಯದರ್ಶಿಯಾಗಿ ರಾಯಚೂರಿನ ಡಿ. ಅಚ್ಯುತ ರೆಡ್ಡಿ ಅವರನ್ನು ನೇಮಕ ಮಾಡಿ ಸಂಘದ ವತಿಯಿಂದ ಅಧಿಕೃತ ಆದೇಶ ಹೊರಡಿಸಲಾಗಿದೆ.
ಮಕ್ಕಳ ಮೇಲಿನ ದೌರ್ಜನ್ಯ ಹಾಗೂ ಶೋಷಣೆಯಂತಹ ಪ್ರಕರಣಗಳು ಸಂಭವಿಸಿದ ನಂತರ ಕ್ರಮ ಕೈಗೊಳ್ಳುವುದಕ್ಕಿಂತ, ಅವುಗಳನ್ನು ಮುಂಚಿತವಾಗಿಯೇ ಗುರುತಿಸಿ ತಡೆಗಟ್ಟುವುದು ಅತ್ಯಂತ ಮುಖ್ಯವಾಗಿದೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ಕಂಚಿ ಮಾಯಣ್ಣ ಗೌತಮ್ ಹೇಳಿದರು.
ವಿದ್ಯಾರ್ಥಿಗಳು ಉತ್ತಮ ವ್ಯಕ್ತಿತ್ವ ರೂಪಿಸಿಕೊಳ್ಳಲು ನೈತಿಕ ಮೌಲ್ಯಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳುವುದರ ಜೊತೆಗೆ ನಾಯಕತ್ವದ ಗುಣಗಳನ್ನು ಬೆಳೆಸಿಕೊಳ್ಳಬೇಕು ಎಂದು ಹಿರಿಯ ಉಪನ್ಯಾಸಕ ಗೋವರ್ಧನ್ ರೆಡ್ಡಿ ಕರೆ ನೀಡಿದರು.
ಬಾಲ್ಯವಿವಾಹವು ಮಕ್ಕಳ ಶಿಕ್ಷಣ, ಆರೋಗ್ಯ ಹಾಗೂ ಭವಿಷ್ಯದ ಮೇಲೆ ಗಂಭೀರ ಪರಿಣಾಮ ಬೀರುವುದರಿಂದ ಅದನ್ನು ತಡೆಗಟ್ಟಲು ಕಾನೂನು ಅರಿವು ಮತ್ತು ಸಾರ್ವಜನಿಕರ ಸಹಕಾರ ಅತ್ಯಗತ್ಯ ಎಂದು ವಕೀಲ ಮಲ್ಲಿಕಾರ್ಜುನ ಪೆನಾಲ್ ತಿಳಿಸಿದರು.
ಮಾನಸಿಕ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿರುವ ವ್ಯಕ್ತಿಗಳನ್ನು ನಿರ್ಲಕ್ಷಿಸದೆ, ಅವರಿಗೆ ಕುಟುಂಬದವರ ಪ್ರೀತಿ, ಸಹಕಾರ, ಧೈರ್ಯ ಹಾಗೂ ಸೂಕ್ತ ಆಪ್ತಸಮಾಲೋಚನೆಯೊಂದಿಗೆ ವೈದ್ಯಕೀಯ ಚಿಕಿತ್ಸೆ ಒದಗಿಸುವುದು ಅತ್ಯಂತ ಅಗತ್ಯವಾಗಿದೆ ಎಂದು ಮನಶಾಸ್ತ್ರಜ್ಞ ಅರುಣ್ ಕುಮಾರ್ ಕುಲಕರ್ಣಿ ಹೇಳಿದರು.
ತಾಲೂಕಿನ ದೇವಸೂಗೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಬ್ಬೇರು ಓಣಿಯಲ್ಲಿ ಆರು ಮನೆಗಳ ಸಾರ್ವಜನಿಕ ಬಳಕೆಗೆ ಕುಡಿಯುವ ನೀರಿನ ನಳ ಅಳವಡಿಸುವುದು ಹಾಗೂ ಚರಂಡಿ ಸ್ವಚ್ಛಗೊಳಿಸುವಂತೆ ಒತ್ತಾಯಿಸಿ ಅಂಬೇಡ್ಕರ್ ಸೇವಾ ಸಮಿತಿ ಕರ್ನಾಟಕದ ವತಿಯಿಂದ ಕೃಷ್ಣ ಅವರು ಗ್ರಾಮ ಪಂಚಾಯಿತಿ ಅಧ್ಯಕ್ಷರು ಹಾಗೂ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಗೆ ಮರುಜ್ಞಾಪನಾ…
ಉಡುಪಿ ಜಿಲ್ಲೆಯ ಬ್ರಹ್ಮಾವರದ ಎಸ್‌ಎಂಎಸ್ ಒಳಾಂಗಣ ಕ್ರೀಡಾಂಗಣದಲ್ಲಿ ಅಕ್ಟೋಬರ್ 25ರಂದು ನಡೆದ ರಾಷ್ಟ್ರಮಟ್ಟದ ಕರಾಟೆ ಸ್ಪರ್ಧೆಯಲ್ಲಿ ರಾಯಚೂರು ತಾಲೂಕಿನ ದೇವಸುಗೂರಿನ ಸೂಗೂರೇಶ್ವರ ಕರಾಟೆ ಸಂಸ್ಥೆಯ ವಿದ್ಯಾರ್ಥಿಗಳು ಅತ್ಯುತ್ತಮ ಪ್ರದರ್ಶನ ನೀಡಿ ವಿವಿಧ ವಿಭಾಗಗಳಲ್ಲಿ ಪದಕ ಹಾಗೂ ಟ್ರೋಫಿಗಳನ್ನು ಗಳಿಸುವ ಮೂಲಕ ಜಿಲ್ಲೆಗೆ ಕೀರ್ತಿ…
ರಾಯಚೂರು, ಅ.31: ನಗರದ ಬೇರೂನಕಿಲ್ಲ ಬಡಾವಣೆಯ ವಾರ್ಡ್ ನಂ. 09ರ ವ್ಯಾಪ್ತಿಯ ಪ್ರಮುಖ ರಸ್ತೆಗಳು ದುಸ್ಥಿತಿಗೆ ತಲುಪಿದ್ದು, ಸಾರ್ವಜನಿಕರ ಸುರಕ್ಷತೆಯ ದೃಷ್ಟಿಯಿಂದ ತಕ್ಷಣ ದುರಸ್ತಿ ಕಾರ್ಯ ಕೈಗೊಳ್ಳಬೇಕು ಎಂದು ಯುವ ಹೋರಾಟಗಾರ ಹಾಗೂ ಸಮಾಜಸೇವಕ ರವಿಚಂದ್ರ ಅಲಿಯಾಸ್ ಆಟೋರವಿ ಆಗ್ರಹಿಸಿದ್ದಾರೆ.
ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವುದು, ಅಪರಾಧ ಚಟುವಟಿಕೆಗಳಿಗೆ ಕಡಿವಾಣ ಹಾಕುವುದು ಹಾಗೂ ಸಾರ್ವಜನಿಕ ಸುರಕ್ಷತೆ ಬಲಪಡಿಸುವ ಉದ್ದೇಶದಿಂದ ಜಿಲ್ಲಾ ಪೊಲೀಸ್ ಇಲಾಖೆ ಅಕ್ಟೋಬರ್ 27ರಿಂದ 30ರವರೆಗೆ ವಿಶೇಷ ಕಾರ್ಯಾಚರಣೆ ನಡೆಸಿ ವಿವಿಧ ಪ್ರಕರಣಗಳನ್ನು ದಾಖಲಿಸಿದೆ.
2026–27ನೇ ಸಾಲಿನ ಸ್ಕೂಲ್ ಗೇಮ್ಸ್ ಫೆಡರೇಷನ್ ಆಫ್ ಇಂಡಿಯಾ (SGFI) ವತಿಯಿಂದ ಆಯೋಜಿಸಿದ್ದ 14 ವರ್ಷದೊಳಗಿನ ಬಾಲಕರ ರಾಜ್ಯಮಟ್ಟದ ಲೆದರ್ ಬಾಲ್ ಕ್ರಿಕೆಟ್ ಪಂದ್ಯಾವಳಿಯಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ ಲಿಂಗಸುಗೂರು ತಾಲೂಕಿನ ವಿದ್ಯಾರ್ಥಿ ಆರ್ಯನ್ ಗೌತಮ್ ರಾಷ್ಟ್ರಮಟ್ಟದ ಸ್ಪರ್ಧೆಗೆ ಆಯ್ಕೆಯಾಗುವ ಮೂಲಕ ಗಮನಾರ್ಹ ಸಾಧನೆ…
ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರ ಪುಣ್ಯತಿಥಿ ಹಾಗೂ ಭಾರತದ ಮೊದಲ ಉಪಪ್ರಧಾನಿ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಜನ್ಮದಿನದ ಅಂಗವಾಗಿ ಶನಿವಾರ ನಗರದ ಜಿಲ್ಲಾ ಕಾಂಗ್ರೆಸ್ ಕಾರ್ಯಾಲಯದಲ್ಲಿ ಸ್ಮರಣಾ ಕಾರ್ಯಕ್ರಮ ಆಯೋಜಿಸಲಾಗಿತ್ತು.
ಬೆಂಗಳೂರು ಹಾಗೂ ರಾಯಚೂರು ಕೃಷಿ ವಿಶ್ವವಿದ್ಯಾನಿಲಯಗಳ ಕುಲಪತಿಗಳ ನೇಮಕಾತಿಯಲ್ಲಿ ಹಣ, ಜಾತಿ ಮತ್ತು ರಾಜಕೀಯ ಪ್ರಭಾವಕ್ಕೆ ಅವಕಾಶ ನೀಡದೆ, ಅರ್ಹತೆ, ಪ್ರಾಮಾಣಿಕತೆ ಹಾಗೂ ರೈತಪರ ಕಾಳಜಿ ಹೊಂದಿರುವ ವ್ಯಕ್ತಿಗಳನ್ನು ಆಯ್ಕೆ ಮಾಡಬೇಕು ಎಂದು ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯ ಗೌರವಾಧ್ಯಕ್ಷ ಚಾಮರಸ ಮಾಲಿಪಾಟೀಲ ಆಗ್ರಹಿಸಿದ್ದಾರೆ.
ಬರಗಾಲ ಹಾಗೂ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಜನಸಾಮಾನ್ಯರು ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ಸಂದರ್ಭದಲ್ಲಿ ಹಾಲಿನ ದರ ಹೆಚ್ಚಳ ಮತ್ತು ಬಸ್ ಪ್ರಯಾಣ ದರ ಏರಿಕೆ ಪ್ರಸ್ತಾವನೆ ಜನರ ಮೇಲೆ ಮತ್ತಷ್ಟು ಹೊರೆ ಹೊರಿಸಲಿದೆ ಎಂದು ಆರೋಪಿಸಿ ಎಸ್‌ಯುಸಿಐ (ಕಮ್ಯುನಿಸ್ಟ್) ಪಕ್ಷದ ಕಾರ್ಯಕರ್ತರು ನಗರದಲ್ಲಿ ಪ್ರತಿಭಟನೆ ನಡೆಸಿದರು.
ಕನ್ನಡ ರಾಜ್ಯೋತ್ಸವದ ಅಂಗವಾಗಿ ನವೆಂಬರ್ 1ರಂದು ನಗರದ ಮಹಾತ್ಮ ಗಾಂಧಿ ಕ್ರೀಡಾಂಗಣದಲ್ಲಿ ರಾಜ್ಯಮಟ್ಟದ ‘ಮಿಸ್ಟರ್ ಕರ್ನಾಟಕ ರತ್ನ–2026’ ದೇಹದಾರ್ಢ್ಯ ಸ್ಪರ್ಧೆ ಆಯೋಜಿಸಲಾಗಿದ್ದು, ರಾಜ್ಯದ ವಿವಿಧ ಜಿಲ್ಲೆಗಳಿಂದ ನೂರಾರು ದೇಹದಾರ್ಢ್ಯ ಪಟುಗಳು ಭಾಗವಹಿಸಲಿದ್ದಾರೆ ಎಂದು ರಾಯಚೂರು ಜಿಲ್ಲಾ ದೇಹದಾರ್ಢ್ಯ ಸಂಘದ ಪ್ರಧಾನ ಕಾರ್ಯದರ್ಶಿ…